ಪುರುಷ ಸಲಿಂಗಿಗಳಲ್ಲಿ ‘ಏಡ್ಸ್‌’ ರೋಗ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್

Date:

ಏಡ್ಸ್‌ ರೋಗ ಹರಡುವಿಕೆಯನ್ನು ತಡೆಯಲು ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 2030ರ ವೇಳೆಗೆ ‘ಎಚ್‌ಐವಿ’ ಹರಡುವಿಕೆಯನ್ನು ಶೂನ್ಯಕ್ಕೆ ಇಳಿಸಲು ಪ್ರಯತ್ನಗಳು ನಡೆಯುತ್ತಿವೆ. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ‘ಪುರುಷ ಸಲಿಂಗಿ’ಗಳನ್ನು ಏಡ್ಸ್‌ ರೋಗ ಹೆಚ್ಚಳವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪುರುಷ ಸಲಿಂಗಿಗಳಲ್ಲಿ ಎಚ್‌ಐವಿ ಸೋಂಕು ಹೆಚ್ಚಾಗಿ ಕಂಡುಬರುತ್ತಿರುವುದು ಕಳವಳ ಮೂಡಿಸಿದೆ. ಬೇರೆ ಬೇರೆ ಆ್ಯಪ್‌ಗಳ ಮೂಲಕ ಮತ್ತು ಹಾಸ್ಟೆಲ್‌ಗಳಲ್ಲಿ ಸ್ನೇಹಿತರ ಸಂಪರ್ಕ ಸಾಧಿಸುತ್ತಾರೆ. ಇದು ಸೋಂಕಿನ ಹರಡುವಿಕೆಗೆ ಕಾರಣವಾಗಿದೆ. ಇದನ್ನು ತಡೆಯಲು ಹೆಚ್ಚಿನ ಶ್ರಮ ಹಾಕಬೇಕಾಗಿದೆ” ಎಂದು ಹೇಳಿದ್ದಾರೆ.

“ಕಳೆದ 10 ವರ್ಷಗಳಲ್ಲಿ (2004ರಿಂದ 2025) ಒಂದು ಲಕ್ಷಕ್ಕೂ ಅಧಿಕ ಜನರು ಏಡ್ಸ್‌ಗೆ ಬಲಿಯಾಗಿದ್ದಾರೆ. ಏಡ್ಸ್‌ ರೋಗ ತಡೆಗಾಗಿ ಹೆಚ್ಚು ಜಾಗೃತಿ ಮೂಡಿಸುವ ಅಗತ್ಯವಿದೆ. ಸರ್ಕಾರ, ಪೋಷಕರು, ಶಿಕ್ಷಕರು, ಸಮಾಜ ಹಾಗೂ ಮಾಧ್ಯಮಗಳ ಸಹಕಾರದಿಂದ ಎಚ್‌ಐವಿ ಹರಡುವಿಕೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಅರಿವು ಹೆಚ್ಚಿಸಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏಡ್ಸ್ ಬಂದಾಗ ಸೂಕ್ತ ಚಿಕಿತ್ಸೆ ಪಡೆದುಕೊಂಡು ಎಲ್ಲರಂತೆ ಬದುಕಬಹುದು. ಸರ್ಕಾರದಿಂದ ಮಾನಸಿಕ ಧೈರ್ಯ ತುಂಬುವುದರ ಜೊತೆಗೆ ಉಚಿತವಾಗಿ ಚಿಕಿತ್ಸೆ, ಮಡಿಸಿನ್ ಒದಗಿಸಲಾಗುತ್ತಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...