ಕರ್ನಾಟಕ | 5 ವರ್ಷದೊಳಗಿನ 1.3 ಲಕ್ಷ ಮಕ್ಕಳನ್ನು ಕಾಡುತ್ತಿದೆ ಅಪೌಷ್ಟಿಕತೆ

Date:

ಕರ್ನಾಟಕದಲ್ಲಿ ಐದು ವರ್ಷದೊಳಗಿನ 1.3 ಲಕ್ಷ ಮಕ್ಕಳು ಅಮಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ, 11,674 ಮಕ್ಕಳು ತೀವ್ರ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಹೇಳಲಾಗಿದೆ.

ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ಸಮಗ್ರ ಮಕ್ಕಳ ಅಭಿವೃದ್ಧಿ ಕಾರ್ಯಕ್ರಮವನ್ನು (ICDS) ಸರ್ಕಾರ ನಡೆಸುತ್ತಿದೆ. ರಾಜ್ಯಾದ್ಯಂತ 65,911 ಅಂಗನವಾಡಿ ಕೇಂದ್ರಗಳಿದ್ದು, ಅವುಗಳ ಮೂಲಕ ಐಸಿಡಿಎಸ್‌ ಕಾರ್ಯಕ್ರಮವನ್ನು ಅನುಷ್ಠಾಗೊಳಿಸಲಾಗಿದೆ. ಅಂಗನವಾಡಿಗಳಲ್ಲಿ 5 ವರ್ಷದೊಳಗಿನ ಒಟ್ಟು 32.91 ಲಕ್ಷ ಮಕ್ಕಳು ಶಿಕ್ಷಣ ಮತ್ತು ಆಹಾರ ಪಡೆಯುತ್ತಿದ್ದಾರೆ. ಆದಾಗ್ಯೂ, ಲಕ್ಷಾಂತರ ಮಕ್ಕಳು ಅಪೌಷ್ಟಿಕತೆಯಿಂದ ಬಳುತ್ತಿದ್ದಾರೆ.

ಬಡವರು ಮತ್ತು ತಳ ಸಮುದಾಯದ ಕುಟುಂಬಗಳಲ್ಲಿನ ಮಕ್ಕಳಲ್ಲಿ ಹೆಚ್ಚು ಅಪೌಷ್ಟಿಕತೆ ಕಾಡುತ್ತಿದೆ. ಐಸಿಡಿಎಸ್‌ ಕಾರ್ಯಕ್ರಮಕ್ಕಾಗಿ ಸರ್ಕಾರ ನೀಡುತ್ತಿದ್ದ ಅನುದಾನದಲ್ಲಿ ಕಡಿತವಾಗಿದೆ. 2024ರ ಬಜೆಟ್‌ನಲ್ಲಿ 300 ಕೋಟಿ ರೂ. ಕಡಿತ ಮಾಡಲಾಗಿದೆ. ಇದೂ ಕೂಡ ಮಕ್ಕಳ ಪೌಷ್ಟಿಕತೆಯ ಮೇಲೆ ಪರಿಣಾಮ ಬೀರಿದೆ. ಜೊತೆಗೆ, ಅಂಗನವಾಡಿ ಕೇಂದ್ರಗಳ ಸ್ಥಿತಿಗತಿಗಳೂ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಹಲವು ಅಂಗನವಾಡಿ ಕೇಂದ್ರಗಳು ಕಳಪೆ ಸ್ಥಿತಿಯಲ್ಲಿವೆ. ಶುದ್ಧ ಕುಡಿಯುವ ನೀರು ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿವೆ. ಹೀಗಾಗಿ, ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ ನೀಡುವಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸಲು ಅಂಗನವಾಡಿ ಊಟದ ಮೆನುವನ್ನು ಸರ್ಕಾರ ಬದಲಿಸಿದೆ. ರಾಗಿ ಲಡ್ಡುಗಳು ಮತ್ತು ಖಿಚಡಿಯಂತಹ ಪೌಷ್ಟಿಕ ಆಹಾರವನ್ನು ಸೇರಿಸಿದೆ. ಆದರೆ, ಸಾಕಷ್ಟು ಮಕ್ಕಳು ಈ ಆಹಾರ ತಿನ್ನಲು ಇಷ್ಟಪಡುತ್ತಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...