ಬಸ್‌ಗಳ ಮೇಲೆ ತಂಬಾಕು ಜಾಹೀರಾತು ನಿಷೇಧ: ಆರೋಗ್ಯ ಇಲಾಖೆ

Date:

  • ತಂಬಾಕು ಜಾಹೀರಾತು ಕಾನೂನು ಉಲ್ಲಂಘನೆ
  • ಆಲ್ಕೋಹಾಲ್, ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ

ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಜಾಹೀರಾತು ಇದ್ದರೆ ತೆರವುಗೊಳಿಸಬೇಕು. ನಿಮ್ಮ ಬಸ್‌ಗಳು ತಂಬಾಕು ಜಾಹೀರಾತು ರಹಿತವಾಗಿರಬೇಕೆಂದು ಬಸ್ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಕೆಲ ದಿನಗಳ ಹಿಂದೆ, ತಂಬಾಕು ಮುಕ್ತ ಕರ್ನಾಟಕ (ಸಿಎಫ್‌ಟಿಎಫ್‌ಕೆ) ಒಕ್ಕೂಟ, “ಅನಧಿಕೃತವಾಗಿ ಬಸ್‌ಗಳ ಮೇಲೆ ಅಳವಡಿಸುವ ತಂಬಾಕು ಜಾಹೀರಾತುಗಳನ್ನು ತೆರವುಗೊಳಿಸಬೇಕು. ಈ ರೀತಿಯ ಜಾಹೀರಾತುಗಳಿಂದ ಜನರು ಪ್ರಚೋದನೆಗೆ ಒಳಗಾಗಿ, ಅದರ ಬಳಕೆ ಹೆಚ್ಚು ಮಾಡುತ್ತಾರೆ. ಇದರಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ. ಈ ರೀತಿ ಪ್ರಚಾರ ಮಾಡುವುದನ್ನು ತಡೆಯಲು ಸೂಚನೆ ನೀಡಬೇಕು” ಎಂದು ಆರೋಗ್ಯ ಇಲಾಖೆಗೆ ಮನವಿ ಮಾಡಿತ್ತು.

ಭಾರತದಲ್ಲಿ ತಂಬಾಕು ಮತ್ತು ಆಲ್ಕೋಹಾಲ್ ಉತ್ಪನ್ನಗಳ ಜಾಹೀರಾತು ನಿಷೇಧಿಸಲಾಗಿದೆ. ವಿಮಲ್ ಪಾನ್ ಮಸಾಲಾ, ರಜನಿಗಂಧ ಸೇರಿದಂತೆ ಮತ್ತಿತ್ತರ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಿಗೆ, ಜಾಹೀರಾತು ಅಳವಡಿಸದಿರಲು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರವು ಈಗಾಗಲೇ ನೋಟಿಸ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹೆಚ್ಚಳ; ರಾಜ್ಯದಲ್ಲಿ ವರ್ಷಕ್ಕೆ 1.4 ಲಕ್ಷ ಪ್ರಕರಣ ದಾಖಲು

ಆದರೂ, ಸೂಚನೆ ಪಾಲಿಸದೆ ತಂಬಾಕು ಮಾರಾಟ ಕಂಪನಿಗಳು ಬಸ್‌ಗಳ ಮೇಲೆ ಜಾಹೀರಾತು ಅಳವಡಿಸಲು ಒಪ್ಪಂದ ಮಾಡಿಕೊಂಡಿವೆ ಎಂದು ಸಿಎಫ್‌ಟಿಎಫ್‌ಕೆ ಆರೋಗ್ಯ ಇಲಾಖೆಗೆ ಹೇಳಿತ್ತು. ಮನವಿಯ ಬೆನ್ನಲೇ ಆರೋಗ್ಯ ಇಲಾಖೆ ಜಾಹೀರಾತು ಅಳವಡಿಕೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದೆ.

“ಇತ್ತೀಚೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಿಮಲ್, ಕೂಲ್ ಲಿಪ್ ಮತ್ತು ಆರ್‌ಎಮ್‌ಡಿಯಂತಹ ಬ್ರ್ಯಾಂಡ್‌ಗಳ ತಂಬಾಕು ಮತ್ತು ಪಾನ್ ಮಸಾಲಾ ಉತ್ಪನ್ನಗಳ ಜಾಹೀರಾತು ಇರುವುದು ಕಂಡುಬಂದಿದೆ. ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ (ಕೋಟ್ಪಾ) ಸೆಕ್ಷನ್ 5 ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ಎಫ್‌ಸಿಟಿಸಿ ಆರ್‍‌ಟಿಕಲ್ 5.3ರ ಉಲ್ಲಂಘನೆಯಾಗಿದೆ. ಇನ್ನೂ ಬಸ್‌ಗಳ ಮೇಲೆ ಜನತೆಯ ಆರೋಗ್ಯಕ್ಕೆ ಹಾನಿಕಾರಕವಾದ ತಂಬಾಕುವಿನ ಜಾಹೀರಾತು ಇರದಂತೆ ನೋಡಿಕೊಳ್ಳಿ” ಎಂದು ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಮೇ .4ರಂದು ಹೊರಡಿಸಿರುವ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...