ಉಮರ್ ಮತ್ತು ಶಾರ್ಜೀಲ್‌ಗೆ ಜಾಮೀನು ನಿರಾಕರಣೆ: ಸುಪ್ರೀಂ ತೀರ್ಪಿನಲ್ಲೇನಿದೆ?

Date:

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರನ್ನು ವಿಚಾರಣೆಯಿಲ್ಲದೆ ಐದು ವರ್ಷಗಳ ಜೈಲುವಾಸದ ನಂತರವೂ ಸುಪ್ರೀಂ ಕೋರ್ಟ್ ಸೋಮವಾರ (ಜ.5) ಜಾಮೀನು ನಿರಾಕರಿಸಿದೆ. ಸಂರಕ್ಷಿತ ಸಾಕ್ಷ್ಯಗಳ ಮರು ತನಿಖೆ ಅಥವಾ ಇಂದಿನಿಂದ ಒಂದು ವರ್ಷದ ಬಳಿಕ ಈ ಇಬ್ಬರು ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ಕೋರ್ಟ್ ಹೇಳಿದೆ.

ಇದೇ ಪ್ರಕರಣದಲ್ಲಿ ಇತರ ಐವರು ಆರೋಪಿಗಳಾದ ಗುಲ್ಫಿಷಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ ಕೋರ್ಟ್, ಪ್ರಕರಣದ ಎಲ್ಲ ಆರೋಪಿಗಳನ್ನು ಒಂದೇ ನೆಲದಲ್ಲಿ ನೋಡಲಾಗದು ಎಂದು ಹೇಳಿದೆ. “ಇವರಿಗೆ ಜಾಮೀನು ನೀಡಿದ ಮಾತ್ರಕ್ಕೆ, ಅಪರಾಧದ ಗಂಭೀರತೆ ದುರ್ಬಲ ಆಗುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ.ಅಂಜಾರಿಯಾ ಅವರ ಪೀಠವು ಹೇಳಿದೆ.

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧ ಸಂಚು ರೂಪಿಸಿದ ಆರೋಪದಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಉಮರ್ ಖಾಲಿದ್ ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿತ್ತು. ಉಮರ್ ಖಾಲಿದ್ ಅವರನ್ನು 13 ಸೆಪ್ಟೆಂಬರ್ 2020 ರಂದು ಮತ್ತು ಶಾರ್ಜೀಲ್ ಅವರನ್ನು 28 ಜನವರಿ 2020ರಂದು ಬಂಧನಕ್ಕೆ ಒಳಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? : ವಿಚಾರಣೆಯೂ ಇಲ್ಲ – ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ ಉಮರ್ ಖಾಲಿದ್

ಡಿಸೆಂಬರ್ 10 ರಂದು, ದೆಹಲಿ ಪೊಲೀಸರ ಪರವಾಗಿ ವಿಚಾರಣೆಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟ‌ರ್ ಜನರಲ್ ಎಸ್ ವಿ ರಾಜು ಮತ್ತು ಆರೋಪಿಗಳ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಫ್ಟಿ, ಸಿದ್ದಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು ಸಿದ್ದಾರ್ಥ್ ಲುತ್ರಾ ಅವರ ವಾದಗಳನ್ನು ಆಲಿಸಿದ ನಂತರ, ಸುಪ್ರೀಂ ಕೋರ್ಟ್ ಆರೋಪಿಗಳ ಪ್ರತ್ಯೇಕ ಅರ್ಜಿಗಳ ಮೇಲಿನ ತೀರ್ಪನ್ನು ಕಾಯ್ದಿರಿಸಿತು.

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ಹಿನ್ನೆಲೆ?

2020ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಸೇರಿ ಸಂಬಂಧಿಸಿದ ಇನ್ನಿತರರನ್ನು ಬಂಧಿಸಲಾಗಿತ್ತು. 2019-20ರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳಲ್ಲಿ ಸಕ್ರಿಯರಾಗಿದ್ದ ಈ ಇಬ್ಬರು, ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರವನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದರು.

ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದ್ದರು. ದಿಲ್ಲಿ ಪೊಲೀಸರ ಪ್ರಕಾರ, ಅಂತರರಾಷ್ಟ್ರೀಯ ಗಮನ ಸೆಳೆಯಲು ಪೂರ್ವ ಯೋಜಿತ ಪಿತೂರಿ ರೂಪಿಸಲಾಗಿತ್ತು. ಉಮರ್ ಖಾಲಿದ್ (ಸೆಪ್ಟೆಂಬರ್ 2020) ಮತ್ತು ಶಾರ್ಜೀಲ್ ಇಮಾಮ್ (ಜನವರಿ 2020) ಅವರನ್ನು ಯುಎಪಿಎ ಸೇರಿದಂತೆ ಗಂಭೀರ ಕಾಯ್ದೆಗಳ ಅಡಿಯಲ್ಲಿ ಬಂಧಿಸಲಾಗಿತ್ತು. ಆರೋಪಗಳು ಗಂಭೀರವಾಗಿರುವುದರಿಂದ ನ್ಯಾಯಾಲಯಗಳು ಜಾಮೀನು ನಿರಾಕರಿಸಿದ್ದು, ಇಬ್ಬರೂ ಇನ್ನೂ ವಿಚಾರಣಾಧೀನ ಕೈದಿಗಳಾಗಿಯೇ ಜೈಲಿನಲ್ಲಿ ಇದ್ದಾರೆ.

ಸುಪ್ರೀಂ ತೀರ್ಪಿನಲ್ಲೇನಿದೆ?

ಸುಪ್ರೀಂ ಕೋರ್ಟ್, ಒಂದೇ ಪ್ರಕರಣಕ್ಕೆ ಎರಡು ರೀತಿಯ ತೀರ್ಪುಗಳನ್ನು ನೀಡಿದೆ. ಐವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ, ಇಬ್ಬರಿಗೆ ಮತ್ತೆ ಸೆರೆವಾಸಕ್ಕೆ ದೂಡಿದೆ.

ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಗಲಭೆಗೆ ಪೂರ್ವ ಯೋಜಿತ ಪಿತೂರಿ, ಜನ ದಟ್ಟಣೆಯ ಕಾರಣ ಮತ್ತು ಕಾರ್ಯತಂತ್ರ ರೂಪಿಸುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಮೇಲ್ನೊಟಕ್ಕೆ ಕಾಣಿಸಿದೆ ಎಂದು ಕೋರ್ಟ್ ಹೇಳಿದೆ.

ಪ್ರಾಸಿಕ್ಯೂಷನ್ ನ್ಯಾಯಾಲಯದ ಮುದಂದಿರಿಸುರವ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯ ಪೀಠ, “ಒಂದೇ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ಒಂದೇ ರೀತಿಯಲ್ಲಿ ನೋಡಲಾಗುವುದಿಲ್ಲ. ಆರೋಪಿಗಳು ನಿರ್ವಹಿಸಿರುವ ಪ್ರಮುಖ ಪಾತ್ರ ಹಾಗೂ ಸಹಾಯಕ ಪಾತ್ರದ ನಡುವಿನ ವ್ಯತ್ಯಾಸವನ್ನು ನಿರ್ಲಕ್ಷಿಸುವುದು ತರ್ಕರಹಿತ ನಿರ್ಧಾರಕ್ಕೆ ಕಾರಣವಾಗುತ್ತದೆ” ಎಂದು ಪೀಠ ಹೇಳಿದೆ.

ವಿಚಾರಣೆ ವಿಳಂಬಕ್ಕೆ ಸಂಬಂಧಿಸದಂತೆ ಉಮರ್ ಖಾಲಿದ್ ಪರ ವಕೀಲರು ಮಂಡಿಸಿದ ವಾದಗಳ ಕುರಿತಂತೆ ನ್ಯಾಯಾಲಯವು, ಯುಎಪಿಎ ಅಡಿ ವಿಚಾರಣೆಗಳಲ್ಲಿ ವಿಳಂಬವು ಶಾಸನಬದ್ಧ ಸುರಕ್ಷತಾ ಕ್ರಮಗಳನ್ನು ಬದಲಿಸುವ ‘ಟ್ರಂಪ್ ಕಾರ್ಡ್’ ಆಗಿ ಕಾರ್ಯನಿರ್ವಹಿಸುವುದಿಲ್ಲ ಎಂದಿದೆ.

ಅದೇ ಸಮಯದಲ್ಲಿ, ಯುಎಪಿಎಯ ಸೆಕ್ಷನ್ 43 ಡಿ (5) ಅಡಿಯಲ್ಲಿ ಜಾಮೀನು ನೀಡುವುದು ಸಾಮಾನ್ಯ ನಿಬಂಧನೆಗಳಿಗಿಂತ ವಿಭಿನ್ನವಾಗಿದೆ. ಆರೋಪಿಯ ವಿರುದ್ಧದ ಆರೋಪಗಳು ಮೇಲ್ನಟಕ್ಕೆ ನಿಜವೆಂದು ಕಂಡುಬಂದರೆ ಜಾಮೀನು ನೀಡಲು ಸಾಧ್ಯವಿಲ್ಲ. ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ವಿಚಾರದಲ್ಲಿ ಈ ನಿಯಮ ಅನ್ವಯವಾಗುತ್ತದೆ. ಇವರ ಕೃತ್ಯಗಳು ಸ್ಥಳೀಯ ಮಟ್ಟದ ಪಿತೂರಿಗಳಲ್ಲದೆ, ಜಾಗತಿಕ ಮಟ್ಟದಲ್ಲಿ ಸಂಚಲನ ಸೃಷ್ಟಿಸುವಲ್ಲಿ ಪ್ರಮುಖವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ

ಯುಎಪಿಎ ತರದ ಜಾಮೀನು ಪ್ರಕರಣಗಳಲ್ಲಿ ಆರೋಪಿಯ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ವಲಯದಲ್ಲಿ ಸೂಕ್ಷ್ಮ ಸಮತೋಲನವನ್ನು ಸಾಧಿಸುವುದು ನ್ಯಾಯಾಲಯದ ಕರ್ತವ್ಯ ಎಂದು ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದರು.

ಐವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡುವಾಗ ಸರ್ವೋಚ್ಚ ನ್ಯಾಯಾಲಯದವು, ಜಾಮೀನು ನೀಡಿಕೆಯು ಅವರ ವಿರುದ್ಧದ ಆರೋಪಗಳು ದರ್ಬಲ ಎಂದು ಸೂಚಿಸುವುದಿಲ್ಲ. ಕಠಿಣ 12 ನೀಡಿದ್ದು, ಈ ಷರತ್ತುಗಳನ್ನು ಉಲ್ಲಂಘಿಸಿದರೆ ವಿಚಾರಣಾ ನ್ಯಾಯಾಲಯವು ಆರೋಪಿಗಳ ವಾದವನ್ನು ಆಲಿಸಿದ ಬಳಿಕ ಜಾಮೀನನ್ನು ರದ್ದುಗೊಳಿಸುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ ಎಂದು ಪೀಠ ಹೇಳಿದೆ.

ಈ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯ ಸೆಕ್ಷನ್ 15ರ ಅಡಿಯಲ್ಲಿ ಭಯೋತ್ಪಾದಕ ಕೃತ್ಯದ ಬಗ್ಗೆ ನ್ಯಾಯಪೀಠ ಹೇಳಿದೆ. ಆರೋಪಿಗಳ ಪರ ವಕೀಲರು ವಾದ ಮಂಡಿಸುವಾಗ ‘ಕೇವಲ ಪ್ರತಿಭಟನೆ, ರಸ್ತೆ ತಡೆ ಮಾಡುವುದು, ಭಯೋತ್ಪಾದನೆ ಆಗುವುದಿಲ್ಲ’ ಎಂದಿದ್ದರು. ಆದರೆ ಸುಪ್ರೀಂ ಕೋರ್ಟ್ ಈ ವಾದವನ್ನು ತಿರಸ್ಕರಿಸಿದೆ.

ಭಯೋತ್ಪಾದನೆಯ ಕೃತ್ಯ ಎಂದರೆ, ಕೇವಲ ಸಾವು ಮತ್ತು ಆಸ್ತಿಪಾಸ್ತಿ ನಾಶಮಾಡುವುದು ಮಾತ್ರವಲ್ಲ. ಅಗತ್ಯ ಸೇವೆಗಳಿಗೆ ಅಡ್ಡಿಪಡಿಸುವುದು ಹಾಗೂ ದೇಶದ ಆರ್ಥಿಕ ಭದ್ರತೆಗೆ ದಕ್ಕೆ ತರುವ ಕೃತ್ಯಗಳು ಸಹ ಭಯೋತ್ಪಾದನೆಯ ವ್ಯಾಪ್ತಿಗೆ ಬರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಈ ವ್ಯಾಖ್ಯಾನ ಯುಎಪಿಎ ಪ್ರಕರಣಗಳಲ್ಲಿ ಮುಂದೆ ಮಹತ್ವದ ತೀರ್ಪಿಗೆ ಕಾರಣವಾಗಬಹುದಾಗಿದೆ.

Manoj
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...