ಕಾಲ್ತುಳಿತ | ದಾರುಣ ಅಂತ್ಯ ಕಂಡವರ ನೆನೆದು ಭಾವುಕರಾದ ಡಿಸಿಎಂ ಡಿ ಕೆ ಶಿವಕುಮಾರ್

Date:

ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ಲೋಪದೋಷ ಸರಿಪಡಿಸಲಾಗುವುದು. ಇದರಿಂದ ನಾವು ಪಾಠವನ್ನು ಕಲಿಯಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭಾವುಕರಾದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, “ನಮ್ಮ ರಾಜ್ಯದಲ್ಲಿ ಇಂತಹ ದುರ್ಘಟನೆ ನಡೆಯುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆರ್‌ಸಿಬಿ ತಂಡ ಬೆಂಗಳೂರಿಗೆ ಬರುತ್ತಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ನಮ್ಮ ಸರ್ಕಾರದ ಮುಂದೆ ಬೇರೆ ಆಯ್ಕೆ ಇರಲಿಲ್ಲ. ಈ ದುರ್ಘಟನೆ ನಡೆದಿರುವುದು ನಮ್ಮ ಕುಟುಂಬದಲ್ಲೇ ಎಂದು ಭಾವಿಸಿದ್ದೇವೆ” ಎಂದರು.

“ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ. ಈ ನೋವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಸತ್ತವರು ನಮ್ಮ ಕುಟುಂಬದ ಸದಸ್ಯರು. ಈ ಪರಿಸ್ಥಿತಿಯಲ್ಲಿ ನಾವು ಸಂತಾಪ ಸೂಚಿಸಬೇಕು. ರಾಜಕೀಯ ಮಾಡಬಾರದು. ಈ ದುರ್ಘಟನೆಯ ಹೊಣೆಯನ್ನು ಒಬ್ಬರೂ ಇಬ್ಬರ ಮೇಲೆ ಹಾಕಲು ಆಗುವುದಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“18 ವರ್ಷಗಳ ಕಾಲ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಲ್ಲಿ ಸಂತೋಷ ಕಟ್ಟೆಯೊಡೆದಿತ್ತು. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದರು ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ನಿನ್ನೆ ಆಸ್ಪತ್ರೆಯಲ್ಲಿ ಮೃತರ ಪೋಷಕರು ಮರಣೋತ್ತರ ಪರೀಕ್ಷೆ ಮಾಡಬೇಡಿ. ನಮ್ಮ ಮಗುವಿನ ಮೃತದೇಹ ನಮಗೆ ಕೊಡಿ ಎಂದು ಅಂಗಲಾಚಿದರು. ನಾವು ಆ ರೀತಿ ಪರೀಕ್ಷೆ ಮಾಡದೇ ಮೃತದೇಹವನ್ನು ಹಸ್ತಾಂತರ ಮಾಡಲು ಹೇಗೆ ಸಾಧ್ಯ? ಇದರಿಂದ ನಾಳೆ ಕಾನೂನಾತ್ಮಕ ಸಮಸ್ಯೆಗಳು ಎದುರಾಗುತ್ತವೆ. ಈ ಸಾವು ಯಾವ ಕಾರಣಕ್ಕೆ ಆಗಿದೆ ಎಂಬ ವೈಜ್ಞಾನಿಕ ವರದಿ ಬೇಕು” ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ರಾಜಕೀಯ ಮಾಡುವುದರಲ್ಲಿ ಅವರು ಮಾಸ್ಟರ್ ಮೈಂಡ್

ಬಿಜೆಪಿಯವರ ಟೀಕೆ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ನಾನು ರಾಜ್ಯದ ಜನತೆಗೆ ಉತ್ತರ ನೀಡಬೇಕೇ ಹೊರತು, ಬಿಜೆಪಿಯವರ ಹೇಳಿಕೆಗೆ ಉತ್ತರಿಸುವ ಅಗತ್ಯವಿಲ್ಲ. ಅವರ ಹೇಳಿಕೆಗಳು ಅಸಂಬದ್ಧ, ರಾಜಕೀಯ ಮಾಡುವುದರಲ್ಲಿ ಅವರು ಮಾಸ್ಟರ್ ಮೈಂಡ್ ಗಳು” ಎಂದು ತಿಳಿಸಿದರು.

“ಕುಮಾರಸ್ವಾಮಿ ಹಾಗೂ ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಇದೇ ಅವರ ವೃತ್ತಿ. ಅವರ ಆಡಳಿತ ಅವಧಿಯಲ್ಲಿ ಏನೆಲ್ಲಾ ಆಗಿದೆ ಎಂದು ಪಟ್ಟಿ ನೀಡಬಹುದು. ಆದರೆ ಅವರ ಮಟ್ಟಕ್ಕೆ ಇಳಿದು ರಾಜಕಾರಣ ಮಾಡಲು ನನಗೆ ಇಚ್ಛೆ ಇಲ್ಲ. ಆದರೆ ಬಾಳಿ ಬದುಕಬೇಕಾಗಿದ್ದ 14-15 ವರ್ಷದ ಮಕ್ಕಳು ಸತ್ತಿರುವುದನ್ನು ಕಣ್ಣಾರೆ ನೋಡಿದ್ದೇನೆ. ಇದನ್ನು ಯಾವುದೇ ಕುಟುಂಬ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಪೊಲೀಸ್ ಆಯುಕ್ತರು ಈ ಕಾರ್ಯಕ್ರಮವನ್ನು 10 ನಿಮಿಷಗಳಲ್ಲಿ ಮುಗಿಸಿ ಎಂದು ಹೇಳಿದರು. ನಾನು ಕೂಡ ಆರ್ ಸಿಬಿ ತಂಡದ ಜೊತೆ ಮಾತನಾಡಿ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು” ಎಂದು ಭಾವುಕರಾದರು.

ಅಧಿವೇಶನದಲ್ಲಿ ಚರ್ಚೆಗೆ ಬಂದಾಗ ಅವರ ಕಾಲದ ಘಟನೆಗಳ ಬಗ್ಗೆ ಪ್ರಸ್ತಾಪಿಸುತ್ತೇನೆ

“ಈ ಘಟನೆ ಬಗ್ಗೆ ರಾಜಕೀಯದವರು ಏನೇ ಟೀಕೆ ಮಾಡಿದರೂ ಲೆಕ್ಕ ಇಲ್ಲ. ಅವರ ಚೇಷ್ಟೆ ಇದ್ದಿದ್ದೆ. ಸಿ.ಟಿ ರವಿ, ಕುಮಾರಸ್ವಾಮಿ, ಅಶೋಕ್ ಸೇರಿದಂತೆ ಎಲ್ಲರದ್ದು ಕೇವಲ ರಾಜಕಾರಣ. ಇದೆಲ್ಲದಕ್ಕೂ ಬೇರೆ ಸಮಯದಲ್ಲಿ ಚರ್ಚೆ ಮಾಡುತ್ತೇನೆ. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಅವರ ಕಾಲದಲ್ಲಿ ಏನಾಗಿತ್ತು ಎಂದು ನಾನು ಪ್ರಸ್ತಾಪ ಮಾಡುತ್ತೇನೆ. ಈಗ ರಾಜಕಾರಣ ಮಾಡುವುದಿಲ್ಲ. ಮಾಧ್ಯಮದವರು ಕೂಡ ಈ ಸಂದರ್ಭದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಬೇಡಿ. ರಾಜಕುಮಾರ್ ಅವರು ಸತ್ತಾಗ ಏನೆಲ್ಲಾ ಆಯಿತು ಎಂದು ನಾನು ಈಗ ಮಾತನಾಡಲು ಬಯಸುವುದಿಲ್ಲ. ಅಂತಹ ನೀಚ ರಾಜಕಾರಣ ಮಾಡಲು ನನಗೆ ಇಷ್ಟವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸದಾ ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ಇದೇ ಅವರ ರಾಜಕೀಯ ಅಜೆಂಡಾ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...