ಮತಗಳ್ಳತನ ವಿರುದ್ಧ 1.12 ಕೋಟಿ ಸಹಿ ಸಂಗ್ರಹ: ಎಐಸಿಸಿಗೆ ನ.10ಕ್ಕೆ ಸಲ್ಲಿಕೆ: ಡಿ ಕೆ ಶಿವಕುಮಾರ್

Date:

ಮತಗಳ್ಳತನ ವಿರುದ್ಧ ಎಐಸಿಸಿ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಿದ್ದು, ಕರ್ನಾಟಕ ಕಾಂಗ್ರೆಸ್‌ ಸಹ ಈ ಅಭಿಯಾನದಲ್ಲಿ ಕೈ ಜೋಡಿಸಿದೆ. ನಮ್ಮ ರಾಜ್ಯದಿಂದ 1,12,41000 ಜನರ ಸಹಿ ಸಂಗ್ರವಾಗಿದೆ. ಇದನ್ನು ನ.10ರಂದು ಎಐಸಿಸಿಗೆ ತಲುಪಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ವೋಟ್‌ ಚೋರಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್‌ ಆಂದೋಲನದ ರೀತಿ ಪ್ರತಿಭಟನೆ ನಡೆಸಿದ ಕಾರಣ ಬೇರೆ ದಾರಿ ಇಲ್ಲದೇ ಚುನಾವಣಾ ಆಯೋಗ ಈಗ SIRಗೆ ಮುಂದಾಗಿದೆ. ಮುಂದಿನ ಚುನಾವಣೆಗೆ ಮುನ್ನ ಈ ಗೊಂದಲವೆಲ್ಲ ನಿವಾರಣೆ ಆಗಲೇಬೇಕು” ಎಂದು ಡಿ ಕೆ ಶಿವಕುಮಾರ್‌ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತದಾರರ ಹಕ್ಕು ಕಾಪಾಡಲು ಎಐಸಿಸಿ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. ಎಲ್ಲ ರಾಜ್ಯಗಳಲ್ಲೂ ಮತಗಳ್ಳತನ ಬಗ್ಗೆ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ನ.10ಕ್ಕೆ ಇದನ್ನು ಎಐಸಿಸಿಗೆ ಸಲ್ಲಿಸಬೇಕಿದ್ದು, ಸಮಯವಿಲ್ಲದ ಕಾರಣ ನಾನೇ 10 ನಾಯಕರೊಂದಿಗೆ ವಿಮಾನದಲ್ಲಿ ಹೋಗಿ ಸಹಿ ಸಂಗ್ರಹದ ಮೂಟೆಯನ್ನು ತಲುಪಿಸಿ ಬರುವೆ” ಎಂದು ತಿಳಿಸಿದರು.

“ಡಿಸೆಂಬರ್‌ನಲ್ಲಿ ರಾಹುಲ್‌ ಗಾಂಧಿ ಅವರು ರಾಮಲೀಲಾ ಮೈದಾನದಲ್ಲಿ ದೇಶದ ಸಹಿ ಸಂಗ್ರಹ ಬಗ್ಗೆ ದೊಡ್ಡ ಸಮಾವೇಶ ಮಾಡಿ, ರಾಷ್ಟ್ರದ ಜನರ ಅಭಿಪ್ರಾಯವನ್ನು ರಾಷ್ಟ್ರಪತಿ ಮತ್ತು ಕೇಂದ್ರ ಚುನಾವಣೆ ಆಯೋಗಕ್ಕೆ ತಲುಪಿಸಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಜನ ಗಣ ಮನ’ಕ್ಕೆ ಬಿಜೆಪಿ ತಿರಸ್ಕಾರ; ರವೀಂದ್ರನಾಥ ಟ್ಯಾಗೋರ್‌ಗೆ ಅಪಚಾರ!

“ಮತಗಳ್ಳತನ ಬಗ್ಗೆ ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರು ದೇಶಾದ್ಯಂತ ಜನ ಜಾಗೃತಿಗೆ ಮುಂದಾಗಿದ್ದಾರೆ. ರಾಜ್ಯದ ಮಹದೇವಪುರ ಮತ್ತು ಆಳಂದದಲ್ಲಿ ನಡೆದಿರುವ ನಕಲಿ ಮತದಾನ ಬಗ್ಗೆ ದಾಖಲೆ ಸಮೇತವಾಗಿ ದೇಶದ ಮುಂದೆ ತೆರೆದಿಟ್ಟಿದ್ದಾರೆ. ಹರಿಯಾಣದಲ್ಲೂ ನಡೆದಿರುವ ನಕಲಿ ಮತದಾನಕ್ಕೆ ದಾಖಲೆಗಳನ್ನು ದೇಶದ ಮುಂದೆ ತೆರೆದಿಟ್ಟಿದ್ದಾರೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಲ್ಲ” ಎಂದು ಹೇಳಿದರು.

“ಕೆಪಿಸಿಸಿ ಎಲ್ಲ ಘಟಕಗಳು ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಪ್ರತಿ ಜಿಲ್ಲೆಯಿಂದಲೂ ಜನರ ಸಹಿ ಸಂಗ್ರಮ ಮಾಡಲಾಗಿದೆ. ಈ ಬಗ್ಗೆ ಶ್ರಮಿಸಿದ ಎಲ್ಲರಿಗೂ ವಿಶೇಷ ಧನ್ಯವಾದ ತಿಳಿಸುವೆ. ಈ ಸಹಿ ಸಂಗ್ರಹ ಅಭಿಯಾನ ಇನ್ಮುಂದೆಯೂ ನಡೆಯಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...