ದೇಶದಲ್ಲಿ ₹1 ಲಕ್ಷ ಕೋಟಿ, ರಾಜ್ಯದಲ್ಲಿ ₹21 ಸಾವಿರ ಕೋಟಿ ಸಕ್ಕರೆ ವಹಿವಾಟು: ಸಚಿವ ಶಿವಾನಂದ ಪಾಟೀಲ

Date:

ಕರ್ನಾಟಕದಿಂದಲೇ ₹21 ಸಾವಿರ ಕೋಟಿ ಸಕ್ಕರೆ ವಹಿವಾಟು ನಡೆದಿದ್ದು, ದೇಶದಲ್ಲಿ ಇದೇ ವರ್ಷ ₹1 ಲಕ್ಷ ಕೋಟಿಗೂ ಅಧಿಕ ಸಕ್ಕರೆ ವಹಿವಾಟು ನಡೆದಿದೆ. ನಮ್ಮ ರಾಜ್ಯದ್ದೇ ಇದರಲ್ಲಿ ಸಿಂಹಪಾಲು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದೇ ವರ್ಷದಲ್ಲಿ ಕಬ್ಬು ಕಳಿಸಿದ ರೈತರಿಗೆ ₹20 ಸಾವಿರ ಕೋಟಿಗೂ ಅಧಿಕ ಬಿಲ್‌ ನೀಡಲಾಗಿದೆ. ಶೇ.99ರಷ್ಟು ಬಿಲ್‌ ಪಾವತಿಯಾಗಿದ್ದು, ಕೆಲವರದ್ದು ಮಾತ್ರ ತಾಂತ್ರಿಕ ಕಾರಣ ಬಾಕಿ ಉಳಿದಿದೆ” ಎಂದರು.

“ರಾಜ್ಯದಲ್ಲಿ ಸಹಕಾರ ಹಾಗೂ ಖಾಸಗಿ ವಲಯ ಸೇರಿ 76 ಸಕ್ಕರೆ ಕಾರ್ಖಾನೆಗಳು ಚಾಲ್ತಿಯಲ್ಲಿವೆ. ಬೆಳಗಾವಿಯಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಗೆ ಪ್ರತಿ ಕಾರ್ಖಾನೆಯೂ ಪ್ರತಿ ಟನ್‌ ಸಕ್ಕೆರೆಗೆ ₹1 ಪಾವತಿಸುತ್ತದೆ. ಹೀಗೆ ಪಾವತಿಯಾದ ಮೊತ್ತವೇ ₹8 ಕೋಟಿ ಆಗಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ ವಿ ದೇಶಪಾಂಡೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ವರಿಷ್ಠರು ಒಪ್ಪಿದರೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಆರ್.ವಿ.ದೇಶಪಾಂಡೆ ಹೇಳಿದ್ದು ವೈಯಕ್ತಿಕ ವಿಚಾರ. ಅವರು ಹಿರಿಯ ಶಾಸಕ. ಮುಖ್ಯಮಂತ್ರಿ ಸ್ಥಾನ ಬಯಸುವುದರಲ್ಲಿ ತಪ್ಪೇನಿದೆ? ಆದರೆ, ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ” ಎಂದರು.

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿ, “ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಸಂಬಂಧ ಕೂಡಲಸಂಗಮದ ಸ್ವಾಮೀಜಿ ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಮಯ ಬಂದಾಗ ಸಿಎಂ ನಿರ್ಧಾರ ತೆಗೆದುಕೊಳ್ಳಲಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...