ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ, ಸಿದ್ದರಾಮಯ್ಯರಿಂದ ನ್ಯಾಯದ ಭರವಸೆ

Date:

ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು. ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿತು. ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ ಸಿ ಪಿ /ಟಿ ಎಸ್ ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ . ಪ್ರತಿಯೊಬ್ಬರಿಗೂ ಪರಿಹಾರ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ , ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ.
ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ ಗೊಂದಲಗಳಿಗೂ ಆದ್ಯತೆ ಮೇರೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅಲೆಮಾರಿ ಸಮುದಾಯಗಳ ಮನವಿ

ನಿವೃತ್ತ ನ್ಯಾ. ನಾಗಮೋಹನ್  ದಾಸ್ ಅವರ ಶಿಫಾರಸಿನಂತೆ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ  ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇ.1ರಷ್ಟು ಮೀಸಲಾತಿ ಕಲ್ಪಿಸಲು ಆದ್ಯತೆ ನೀಡುವಂತೆ, ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ  ಪ್ರತ್ಯೇಕ ನಿಗಮ ರಚನೆ  ಹಾಗೂ ಅಲೆಮಾರಿ ಸಮುದಾಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವ ಕುರಿತಂತೆ ಮುಖ್ಯಮಂತ್ರಿ ಅವರಲ್ಲಿ ನಿಯೋಗ ಮನವಿ ಮಾಡಿತು.

ಸಭೆಯಲ್ಲಿ ಸಚಿವರಾದ ಎಚ್ ಸಿ ಮಹದೇವಪ್ಪ, ಮುಖ್ಯಮಂತ್ರಿಗಳರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಮಾಜಿ ಸಚಿವರಾದ ಎಚ್ ಆಂಜನೇಯ, ವಿವಿಧೆಡೆಗಳಿಂದ ಆಗಮಿಸಿದ್ದ ಅಲೆಮಾರಿ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...