ಕಾಶ್ಮೀರದಿಂದ 178 ಕನ್ನಡಿಗರು ಇಂದು ರಾಜ್ಯಕ್ಕೆ ವಾಪಸ್

Date:

ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿದೆ.

ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಮುಖ್ಯಮಂತ್ರಿಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಸಕಲ ವ್ಯವಸ್ಥೆಗಳನ್ನು ಮಾಡಿದ್ದಾರೆ. ಅದರಂತೆ 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಇಂದು ಕರೆತರುತ್ತಿದ್ದಾರೆ.

ಇಂದು ಬೆಳಗ್ಗೆ 8.45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12ಕ್ಕೆ ಬಂದಿಳಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಅಬ್ಬರಿಸಿದ ಭಯೋತ್ಪಾದನೆ- ಮೋಶಾರತ್ತ ದಿಟ್ಟಿ ನೆಟ್ಟ ದೇಶ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡಿದ್ದರು.

ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು, ಬುಧವಾರ ಬೆಳಗ್ಗೆಯಿಂದ ಸಂತ್ರಸ್ತ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಮೃತ ಕನ್ನಡಿಗರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ಒದಗಿಸಿದ್ದಾರೆ. ಕರ್ನಾಟಕಕ್ಕೆ ಮರಳುವ ಪ್ರವಾಸಿಗರಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಪರ್ಕ ಸಂಖ್ಯೆ ಸಂಗ್ರಹಿಸಿ ಗುರುವಾರ ಹೊರಡಲಿರುವ ವಿಮಾನಕ್ಕೆ ಸಜ್ಜಾಗಿ ಎಂದು ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ. ಎಷ್ಟು ಪ್ರವಾಸಿಗರು ಇದ್ದೀರಿ? ಎಲ್ಲಿಯವರು ಎಂಬೆಲ್ಲ ವಿವರಗಳನ್ನು ಸಚಿವರು ಕಲೆ ಹಾಕಿ ರಾಜ್ಯಕ್ಕೆ ಮರಳಲು ಕೈ ಜೋಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...