ಬಜೆಟ್ | 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ, ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ : ಸಿಎಂ

Date:

ಡಾ. ರಾಜ್ ಕುಮಾರ್ ಅಭಿನಯದ ಬಂಗಾರದ ಮನುಷ್ಯ ಚಿತ್ರದ ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಹಾಡಿನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದರು.

ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು. 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಘೋಷಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಬಿಸಿನೆಸ್ ಕಾರಿಡಾರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು

ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್

ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...