2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ. 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ,ಉಡುಪಿ ಮೊದಲ ಸ್ಥಾನ ಪಡೆದಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ. 93.90 ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (ಶೇ. 93.57), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(ಶೇ. 85.36) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (ಶೇ.73.45) ಪಡೆದುಕೊಂಡಿದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಉನ್ನತ ಶ್ರೇಣಿ- 1,00,571, ಪ್ರಥಮ ದರ್ಜೆ- 2,78,054, ದ್ವೀತಿಯ ದರ್ಜೆ-70969, ತೃತೀಯ ದರ್ಜೆ-18845 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಮಧ್ಯಾಹ್ನ 1:30 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಕಲಾ ವಿಭಾಗದಲ್ಲಿ 53.29, ವಾಣಿಜ್ಯ ವಿಭಾಗದಲ್ಲಿ 76.07,ವಿಜ್ಞಾನ ವಿಭಾಗದಲ್ಲಿ 82.54 ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿನಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಭಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ





