ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ವಕೀಲರಿಗೆ 30% ಮೀಸಲಾತಿ

Date:

ಕರ್ನಾಟಕದಲ್ಲಿ ಇರುವ ಎಲ್ಲ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿನ ಖಜಾಂಜಿ ಹುದ್ದೆಯೂ ಸೇರಿ ಒಟ್ಟು ಹುದ್ದೆಗಳಲ್ಲಿ 30% ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ದೆಹಲಿ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಖಜಾಂಜಿ ಹುದ್ದೆ ಮತ್ತು ಇತರ ಹುದ್ದೆಗಳಲ್ಲಿ 33% ಮೀಸಲಾತಿ ನೀಡಬೇಕೆಂದು 2024ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಅದರಂತೆಯೇ, ಕರ್ನಾಟಕದ ಎಲ್ಲ ವಕೀಲರ ಸಂಘಗಳಿಗೂ 30% ಮಹಿಳಾ ಮೀಸಲಾತಿ ನಿಗದಿ ಮಾಡಿ, ಆದೇಶಿಸುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಆಲಿಸಿದ್ದ ಸುಪ್ರೀಂ ಕೋರ್ಟ್‌, ಬೆಂಗಳೂರಿನ ವಕೀಲರ ಸಂಘದ (ಎಎಬಿ) ಹುದ್ದೆಗಳಲ್ಲಿ 30% ಮೀಸಲಾತಿ ನೀಡುವಂತೆ ಆದೇಶಿಸಿತ್ತು.

ಜನವರಿ 28ರಂದು ಎಎಬಿ ಚುನಾವಣೆ ನಡೆದಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಎಎಬಿ ಚುನಾವಣೆ ನಡೆಸಲಾಗಿದೆ. ಸಂಘದಲ್ಲಿ ಮಹಿಳಾ ವಕೀಲರಿಗೆ 30% ಮೀಸಲಾತಿ ಜಾರಿಗೊಳಿಸಲಾಗಿದೆ ಎಂದು ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್‌ ಗಮನಕ್ಕೆ ತರಲಾಗಿತ್ತು. ವರದಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಅವರಿದ್ದ ಪೀಠವು, ‘ಎಎಬಿ ಚುನಾವಣೆಗೆ ನೀಡಲಾಗಿದ್ದ ಆದೇಶವು ಎಲ್ಲ ಜಿಲ್ಲಾ ವಕೀಲರ ಸಂಘಗಳಿಗೂ ಅನ್ವಯವಾಗುತ್ತದೆ’ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಿಧ ಜಿಲ್ಲಾ ವಕೀಲರ ಸಂಘಗಳಿಗೆ ಚುನಾವಣೆಗಳು ಬಾಕಿ ಉಳಿದಿರುವುದನ್ನು ಗಮನಿಸಿದ ನ್ಯಾಯಾಲಯ, ಎಎಬಿಗೆ ನೀಡಿದ್ದ ಮಹಿಳಾ ಮೀಸಲಾತಿಯ ಆದೇಶಗಳನ್ನು ಕರ್ನಾಟಕದ ಎಲ್ಲ ವಕೀಲರ ಸಂಘದ ಚುನಾವಣೆಗಳಿಗೂ ಅನ್ವಯಿಸಬೇಕು ಎಂದು ಸೂಚಿಸಿದೆ.

ಇದೇ ರೀತಿ ಆದೇಶ ನೀಡಿದ್ದ ಹೈಕೋರ್ಟ್‌

ಎಎಬಿಯಂತೆ ರಾಜ್ಯದ ಎಲ್ಲ ವಕೀಲರ ಸಂಘಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಕೂಡ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿತ್ತು.

ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ​​(ಟಿಬಿಎ) ಮಹಿಳಾ ವಕೀಲರಿಗೆ ಶೇ.33ರಷ್ಟು ಮೀಸಲಾತಿ ಕೋರಿ ಮಹಿಳಾ ವಕೀಲರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಎರಡು ದಿನಗಳ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಎಂ ನಾಗಪ್ರಸನ್ನ ಅವರಿದ್ದ ಪೀಠವು, “ಏಪ್ರಿಲ್ 5ರಂದು ನಡೆಯಲಿರುವ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಜಂಟಿ ಕಾರ್ಯದರ್ಶಿ ಹುದ್ದೆ ಮತ್ತು ಎರಡು ಕಾರ್ಯಕಾರಿ ಮಂಡಳಿ ಹುದ್ದೆಗಳನ್ನು ಕಾಯ್ದಿರಿಸಬೇಕು. ಒಟ್ಟು ಹುದ್ದೆಗಳಲ್ಲಿ 30% ಹುದ್ದೆಗಳನ್ನು ಮಹಿಳಾ ವಕೀಲರಿಗೆ ನೀಡಬೇಕು” ಎಂದು ಆದೇಶಿಸಿತ್ತು.

ಆದರೆ, “ಮುಂಬರುವ ಚುನಾವಣೆಗಳು ಪೂರ್ಣಗೊಂಡ ನಂತರ ಈ ಬದಲಾವಣೆಗಳನ್ನು ಅಳವಡಿಸಲು ಸಂಘದ ಬೈಲಾಗಳನ್ನು ಸಹ ತಿದ್ದುಪಡಿ ಮಾಡಲಾಗುವುದು” ಎಂದು ಟಿಬಿಎ ಪರ ವಕೀಲರು ತಿಳಿಸಿದ್ದರು. ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, “ಈಗ ಮೀಸಲಾತಿ ಜಾರಿ ಮಾಡಲಿಲ್ಲ ಎಂದರೆ ಯಾವಾಗ ಮಾಡುವಿರಿ? ವಕೀಲರ ಸಂಘಗಳನ್ನು ‘ಬಾಯ್ಸ್‌ ಕ್ಲಬ್‌’ ಆಗಿರಲು ಬಿಡಲಾಗದು” ಎಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...