ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಅಬ್ಬರ: ಇಂದು 3 ಗಂಟೆಯಿಂದಲೇ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ; ಆರ್‌ಸಿಬಿ ಪಂದ್ಯದ ಕತೆಯೇನು?

Date:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ ಸಂಜೆ ದಕ್ಷಿಣ ಒಳನಾಡು, ಕರವಾಳಿ ಮತ್ತು ಉತ್ತರ ಒಳನಾಡು ಭಾಗದ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೂ 4 ದಿನಗಳ ಮಳೆಯಾಗಲಿದ್ದು, ಮೇ 7ರವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ3 ಗಂಟೆಯಿಂದಲೇ ಮಳೆ ಅಬ್ಬರ ಆರಂಭವಾಗುವ ಸಾಧ್ಯತೆ ಇದ್ದು, ಇಂದು ನಡೆಯಲಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ ಏನಾಗಲಿದೆ ಎಂಬ ಪ್ರಶ್ನೆಯೂ ಕ್ರಿಕೆಟ್ ಅಭಿಮಾನಿಗಳಲ್ಲಿದೆ.

ಬಂಗಾಳಕೊಲ್ಲಿಯಲ್ಲಿ ನಿರಂತರ ಚಂಡಮಾರುತ ಪರಿಚಲನೆಯಾಗಿತ್ತಿದೆ. ಪರಿಣಾಮವಾಗಿ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಕರ್ನಾಟಕ ದಕ್ಷಿಣ ಜಿಲ್ಲೆಗಳಲ್ಲಿ ವೇಗವಾಗಿ ಗಾಳಿ ಬೀಸುತ್ತಿದ್ದು, ಪ್ರತಿ ಗಂಟೆಗೆ 50ರಿಂದ 60 ಕಿ.ಮೀ ವೇಗವಿದೆ ಎಂದು ಇಲಾಖೆ ತಿಳಿಸಿದೆ.

ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಅಲ್ಲದೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚು ಮಳೆ ನಿರೀಕ್ಷೆ ಇರುವ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: ನಿಜಕ್ಕೂ ಜಾತಿಗಣತಿ ನಡೆಸುತ್ತದಾ ಬಿಜೆಪಿ; ಸಿದ್ಧವಿರುವ ವರದಿ ಜಾರಿ ಮಾಡದೆ ವಿಳಂಬ ಮಾಡುತ್ತಿರುವುದೇಕೆ ಕಾಂಗ್ರೆಸ್‌?

ಶನಿವಾರ ರಾತ್ರಿ, ಎಐಎಲ್ ಟೂರ್ನಿಯ ನಿರ್ಣಾಯಕ ಪಂದ್ಯವು ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವೆ ಬೆಂಗಳೂರಿನಲ್ಲಿ ನಡೆಯಲಿದೆ. ತವರು ನೆಲದಲ್ಲಿ ಆಡುತ್ತಿರುವ ಆರ್‌ಸಿಬಿ ತಂಡವು ಸಿಎಸ್‌ಕೆಯನ್ನು ಮಣಿಸಲಿದೆ ಎಂಬ ವಿಶ್ವಾಸ ಆರ್‌ಸಿಬಿ ಅಭಿಮಾನಿಗಳಲ್ಲಿದೆ. ಆದರೆ, ಬೆಂಗಳೂರಿನಲ್ಲಿ ಮಧ್ಯಾಹ್ನ 3 ಗಂಟೆಯಿಂದಲೇ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...