ರಾಜ್ಯಾದ್ಯಂತ 474 ಹೊಸ ಕೆಪಿಎಸ್ ಶಾಲೆಗಳು: ಭಾರೀ ಮಹತ್ವದ ತೀರ್ಮಾನ

Date:

ರಾಜ್ಯ ಸರ್ಕಾರವು ರಾಜ್ಯಾದ್ಯಂತ 474 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಉನ್ನತೀಕರಿಸುವ ಭಾರೀ ಮಹತ್ವದ ತೀರ್ಮಾನ ಕೈಗೊಂಡಿದೆ. ಇದರಿಂದಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಬದಲಾವಣೆ ತರಲು ಮಾರ್ಗ ಸುಗಮವಾಗಿದೆ. ಈ ಆದೇಶವು 2025-26 ಮತ್ತು 2026-27ರ ಸಾಲಿನಲ್ಲಿ ಜಾರಿಗೊಳ್ಳಲಿದ್ದು, ರಾಜ್ಯ ಆಯವ್ಯಯ ಹಾಗೂ ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸಾಲ ಯೋಜನೆಯಡಿ ಅನುದಾನ ಒದಗಿಸಲಾಗುವುದು.

ಕರ್ನಾಟಕದಲ್ಲಿ ಪ್ರಸ್ತುತ 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಹಾಗೂ 1,319 ಪದವಿ ಪೂರ್ವ ಕಾಲೇಜುಗಳು ಸೇರಿವೆ. ಆದರೆ ಕೇವಲ 309 ಶಾಲೆಗಳು ಮಾತ್ರ ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಸಂಯುಕ್ತ ವ್ಯವಸ್ಥೆ ಹೊಂದಿವೆ. ವಿದ್ಯಾರ್ಥಿಗಳ ದಾಖಲಾತಿ 2015-16ರಲ್ಲಿ 47.1 ಲಕ್ಷದಿಂದ 2025-26ರಲ್ಲಿ 38.2 ಲಕ್ಷಕ್ಕೆ ಕುಸಿದಿದ್ದು, ಸರ್ಕಾರಿ ಶಾಲೆಗಳ ಪಾಲು ಶೇ. 46ರಿಂದ ಶೇ. 38ಕ್ಕೆ ಇಳಿದಿದೆ. ಖಾಸಗಿ ಶಾಲೆಗಳ ಪಾಲು ಹೆಚ್ಚಾಗಿದ್ದು, 50 ಅಥವಾ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳ ಸಂಖ್ಯೆ 25,683ಕ್ಕೆ ಏರಿಕೆಯಾಗಿದೆ.

ದಾಖಲಾತಿ ಅನುಪಾತ (GER) ಪ್ರಾಥಮಿಕ ವಿಭಾಗದಲ್ಲಿ ಶೇ 98.65, ಹಿರಿಯ ಪ್ರಾಥಮಿಕದಲ್ಲಿ ಶೇ 99.79 ಹಾಗೂ ಪ್ರೌಢಶಾಲೆಯಲ್ಲಿ ಶೇ 96.08 ಇದ್ದರೂ, ಡ್ರಾಪ್‌ಔಟ್ ದರ ಪ್ರೌಢಶಾಲೆಯಲ್ಲಿ ಶೇ 22.88ರಷ್ಟು ಹೆಚ್ಚಿದೆ. ಇದನ್ನು ಕಡಿಮೆಗೊಳಿಸಲು ಒಂದೇ ಆವರಣದಲ್ಲಿ ಪ್ರಾಥಮಿಕದಿಂದ ಪದವಿ ಪೂರ್ವದವರೆಗೆ ಶಿಕ್ಷಣ ನೀಡುವುದು ಸೂಕ್ತವೆಂದು ಸರ್ಕಾರ ಗುರುತಿಸಿದೆ. ಕೆಪಿಎಸ್ ಮಾದರಿಯು ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಸಂಯುಕ್ತ ಶಿಕ್ಷಣ ಒದಗಿಸಿ, ಗುಣಮಟ್ಟದ ಕಲಿಕೆಯನ್ನು ಉತ್ತೇಜಿಸುತ್ತದೆ. 2018-19ರಲ್ಲಿ 176 ಶಾಲೆಗಳೊಂದಿಗೆ ಆರಂಭವಾದ ಕೆಪಿಎಸ್ ಈಗ 309ಕ್ಕೆ ವಿಸ್ತರಿಸಿದ್ದು, ಸರಾಸರಿ ದಾಖಲಾತಿ 819ಕ್ಕೆ ಏರಿದೆ. 10ನೇ ತರಗತಿಯ ಫಲಿತಾಂಶ ಶೇ 79.97ರಷ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಕೆಪಿಎಸ್ ಶಾಲೆಗಳಲ್ಲಿ ನಿರಂತರ ಪರಿಶೀಲನೆ ಕೊರತೆ, ಗುಣಮಟ್ಟ ನೀತಿ ಇಲ್ಲದಿರುವುದು, ಶಿಕ್ಷಕರ ನಿರಂತರತೆ ಕೊರತೆ, ನಾಲ್ಕು ವರ್ಗಾವಣೆ ಪ್ರಮಾಣಪತ್ರಗಳ ಅಗತ್ಯ, ವಿಭಿನ್ನ UDISE ಕೋಡ್‌ಗಳು ಹಾಗೂ ಬ್ಯಾಂಕ್ ಖಾತೆಗಳು, ಧನಸಹಾಯ ಕಾರ್ಯನಿರ್ವಹಣೆ ಸಮಸ್ಯೆಗಳು ಇದ್ದವು. ಇದನ್ನು ಪರಿಹರಿಸಲು ಸರ್ಕಾರ ಭವಿಷ್ಯ-ಕೇಂದ್ರಿತ ನೀತಿಯನ್ನು ಜಾರಿಗೊಳಿಸಿದೆ. ಸಣ್ಣ ಗಾತ್ರದ ಶಾಲೆಗಳನ್ನು ಸಂಯುಕ್ತಗೊಳಿಸಿ, ಕನಿಷ್ಠ 1200 ವಿದ್ಯಾರ್ಥಿಗಳಿಗೆ ಸೌಕರ್ಯ ಒದಗಿಸುವ ಉದ್ದೇಶವಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!

ಪ್ರಸ್ತಾವನೆಯಂತೆ, ಕಲ್ಯಾಣ ಕರ್ನಾಟಕದಲ್ಲಿ 200 ಶಾಲೆಗಳು ಹಾಗೂ ರಾಜ್ಯದ ಇತರೆಡೆ 500 ಶಾಲೆಗಳನ್ನು ಕೆಪಿಎಸ್‌ಗಳಾಗಿ ಉನ್ನತೀಕರಿಸಲು ಆದೇಶ ಹೊರಡಿಸಲಾಗಿದೆ. ಆಯ್ದ ಮ್ಯಾಗ್ನೆಟ್ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ನವೀಕರಣ, ದ್ವಿಭಾಷಾ ಬೋಧನೆ, ಕ್ರಿಯಾಶೀಲ ಕಲಿಕೆ, ವೃತ್ತಿಪರ ತರಬೇತಿ, STEAM ಶಿಕ್ಷಣ, AI ಸಂಪನ್ಮೂಲಗಳು ಸೇರಿದ್ದು, ಪ್ರತಿ ಶಾಲೆಗೆ ರೂ.2-4 ಕೋಟಿ ಅನುದಾನ ಒದಗಿಸಲಾಗುವುದು. ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್, ತರಬೇತಿ, ಹತ್ತು ವರ್ಷ ಸ್ಥಿರ ಸೇವೆ ಖಾತರಿ ಮುಂತಾದ ಕ್ರಮಗಳು ಸೇರಿವೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ನಿಧಿಯ ಮೂಲಕ 200 ಶಾಲೆಗಳನ್ನು, ಕರ್ನಾಟಕ ಗಣಿ ಪರಿಸರಪುನಶ್ಚೇತನ ನಿಗಮದ ವತಿಯಿಂದ ಗಣಿ ಬಾಧಿತ 10 ತಾಲೂಕುಗಳಲ್ಲಿ 100 ಕೆಪಿಎಸ್ ಶಾಲೆಗಳನ್ನು ಉನ್ನತೀಕರಿಸಲು ಪ್ರತ್ಯೇಕ ಯೋಜನಾ ವರದಿಯನ್ನು(ಡಿಪಿಆರ್) ತಯಾರಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2 ರಿಂದ 3 ಕೆಪಿಎಸ್ ಶಾಲೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ತಾಲೂಕಿನಲ್ಲಿ 4 ರಿಂದ 5 ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು

ಅನುಬಂಧ-1ರಲ್ಲಿ ಪಟ್ಟಿ ಮಾಡಿರುವ 474 ಶಾಲೆಗಳು ವಿವಿಧ ಜಿಲ್ಲೆಗಳಾದ ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ವಿಜಯಪುರ, ಯಾದಗಿರಿಗಳಲ್ಲಿ ಹರಡಿವೆ. ಉದಾಹರಣೆಗೆ, ಬಾಗಲಕೋಟೆಯ ಮುಧೋಳದ GOVT-HIGHER PRIMARY AND HIGH SCHOOL MALALI RMSA, ಬೆಳಗಾವಿಯ GHPS DEVALAPUR+ GHS DEVALAPUR ಮುಂತಾದವುಗಳು ಸೇರಿವೆ.

ಆದೇಶ ಸಂಖ್ಯೆ ಇಪಿ 64 ಎಂಪಿಇ 2024 ದಿನಾಂಕ 15.10.2025ರಂದು ಹೊರಡಿಸಲಾಗಿದ್ದು, ಷರತ್ತುಗಳಂತೆ ಒಂದೇ UDISE ಕೋಡ್, ಉಚಿತ ಸಾರಿಗೆ, SDMC ಮೂಲಕ ನಿರ್ವಹಣೆ, ಕರ್ನಾಟಕ ಪಬ್ಲಿಕ್ ಶಾಲಾ ಮಾನಕ ಕೈಪಿಡಿ ಅಳವಡಿಕೆ, ಆಡಳಿತ ಮಂಡಳಿ ರಚನೆ ಮುಂತಾದವುಗಳು ಸೇರಿವೆ. ಉಳಿದ 26 ಶಾಲೆಗಳಿಗೆ ಮುಂದಿನ ದಿನಗಳಲ್ಲಿ ಮಂಜೂರಾತಿ ನೀಡಲಾಗುವುದು. ಈ ಯೋಜನೆಯು ಸಮಾನ ಗುಣಮಟ್ಟದ ಶಿಕ್ಷಣಕ್ಕೆ ಬಲವಾದ ಮಾನದಂಡ ಸ್ಥಾಪಿಸುತ್ತದೆ ಎಂದು ಸರ್ಕಾರ ಹೇಳಿದೆ.

ಮಕ್ಕಳಿಗೆ ಉಚಿತ ಸಾರಿಗೆ-ಕಂಪ್ಯೂಟರ್‌ ತರಬೇತಿ

ಕೆಪಿಎಸ್ ಶಾಲೆಗಳಿಗೆ 5 ಕಿ.ಮೀ. ವ್ಯಾಪ್ತಿಯ ಊರುಗಳಿಂದ ಮಕ್ಕಳನ್ನು ಕರೆದುಕೊಂಡು ಬರಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪ್ರತಿ ಶಾಲೆಯಲ್ಲಿ ಕನಿಷ್ಠ 1200 ರಿಂದ ಗರಿಷ್ಠ 1800 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುವ ಗುರಿ ಹೊಂದಲಾಗಿದೆ. ಈ ಪೈಕಿ ಎಲ್‌ಕೆಜಿ, ಯುಕೆಜಿಗೆ ಕನಿಷ್ಠ 40ರಿಂದ 50 ಮಕ್ಕಳು, ಉಳಿದ ತರಗತಿಗಳಿಗೆ ಕನಿಷ್ಠ 50ರಿಂದ 60 ಮಕ್ಕಳ ಪ್ರವೇಶಕ್ಕೆ ಅವಕಾಶ ನೀಡಲು ಉದ್ದೇಶಿಸಲಾಗಿದೆ. ಈ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ದ್ವಿಭಾಷಾ ಮಾಧ್ಯಮ ಬೋಧನೆ ಇರುತ್ತದೆ. ಜೊತೆಗೆ 1ನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್‌ ತರಬೇತಿ ನೀಡಲಾಗುವುದು.

ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಶಿಕ್ಷಣ ಸುಧಾರಣಾ ಸಮಿತಿ ರಚಿಸಲಾಗುತ್ತದೆ. ಈ ಯೋಜನೆ ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯ, ಕಲಿಕಾ ಗುಣಮಟ್ಟ ಹೆಚ್ಚಿಸಲು ಸರ್ಕಾರ ಬದ್ಧತೆ ಹೊಂದಿದೆ. ಕೆಪಿಎಸ್‌ ಶಾಲೆಗಳೂ ಸೇರಿ ಎಲ್ಲ ಸರ್ಕಾರಿ ಶಾಲೆಗಳಿಗೂ ಇನ್ನು ಮುಂದೆ ನವೆಂಬರ್‌ ತಿಂಗಳಿಂದಲೇ ದಾಖಲಾತಿ ಆಂದೋಲನ ನಡೆಸಲಾಗುವುದು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...