ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ₹60 ಕೋಟಿ ಮಂಜೂರು: ಪ್ರಿಯಾಂಕ್ ಖರ್ಗೆ

Date:

ಕರ್ನಾಟಕ ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿದ್ದು, ಬೇಸಿಗೆ ಸಮಯದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಪರಿಸ್ಥಿತಿಯನ್ನು ಎದುರಿಸಲು 60 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

2025-26ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು, ಟ್ಯಾಂಕರ್ಗಳ ಮುಖಾಂತರ ಹಾಗೂ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಹಾಗೂ ಕೊಳವೆಬಾವಿಗಳು ಬತ್ತಿ ಹೋದಲ್ಲಿ ಪ್ರಥಮ ಆದ್ಯತೆ ಮೇರೆಗೆ ಮೇಲೆ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಪಡೆಯಲು, ಲಭ್ಯವಿಲ್ಲದಿದ್ದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡುವುದೇ ಅಲ್ಲದೆ, ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯ ಅನುಸಾರ ಕೊಳವೆಬಾವಿಗಳನ್ನು ಕೊರೆದು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಅನುದಾನವನ್ನು ಬಳಸಿಕೊಳ್ಳಬೇಕೆಂದು ಸಚಿವರು ನಿರ್ದೇಶನ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...