ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧರೊಬ್ಬರ ಮೇಲೆ ನ. 25ರಂದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
‘ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೊಲೆ ಬೆದರಿಕೆ ಒಡ್ಡಿದ್ದಾರೆ. ಸಿದ್ದಿಕೇರಿಗೆ ಹೋಗುವ ಮಾರ್ಗದಲ್ಲಿನ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮೆಹಬೂಬ್ ನಗರದ ಅಂಧ ವ್ಯಕ್ತಿಯಾಗಿರುವ ಹುಸೇನ್ ಸಾಬ್(65) ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯ ಸಂಬಂಧ ಪೊಲೀಸರು ಅಪರಿಚಿತರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.
#TNIEexclusive #Karnataka In a heinous act a 65-years-old Muslim man was beaten by a duo, forced to chant Jai Shriram and burnt his beard in #Gangavati town of #Koppal FIR registered.
Security increased in the town.@NewIndianXpress@XpressBengaluru @KannadaPrabha pic.twitter.com/NKuOkypCKl— Amit Upadhye (@AmitSUpadhye) December 1, 2023
ಕೆಲಸದ ನಿಮಿತ್ತ ಹೊಸಪೇಟೆಗೆ ಹೋಗಿ ನ. 25ರಂದು ಮಧ್ಯರಾತ್ರಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೊ ನಿಲ್ದಾಣದ ಬಳಿ ಕಾಯುತ್ತಿದ್ದೆ. ಆಗ ಬೈಕ್ ಮೇಲೆ ಬಂದ ಕೆಲವು ಯುವಕರು ಎಲ್ಲಿಗೆ ಹೋಗುತ್ತಿದ್ದಿಯಾ? ಎಂದು ಪ್ರಶ್ನಿಸಿದರು. ಬಲವಂತವಾಗಿ ಬೈಕ್ ಮೇಲೆ ಕೂರಿಸಿಕೊಂಡು ಪಂಪಾನಗರ ಬಳಿ ಕರೆದುಕೊಂಡು ಹೋದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಳಿಕ ಸಿದ್ದಿಕೇರಿಗೆ ಹೋಗುವ ಮಾರ್ಗದಲ್ಲಿನ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ. ನೆಲದ ಮೇಲೆ ಬೀಳಿಸಿ ಹಲ್ಲೆ ಮಾಡಿದ ಯುವಕರ ಗುಂಪು, ನನ್ನ ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
‘ನನಗೆ ಕಣ್ಣು ಕೂಡ ಕಾಣುವುದಿಲ್ಲ. ನನ್ನ ಬಳಿಯಿದ್ದ ಹಣ ದೋಚಿಕೊಂಡು ಹೋಗಿದ್ದಾರೆ. ಬಳಿಕ ಬೆಳಗಿನ ಜಾವ ಕುರಿ ಕಾಯುವ ಹುಡುಗರು ನನ್ನ ಮನೆಯ ವಿಳಾಸ ಕೇಳಿ ರಕ್ಷಣೆ ಮಾಡಿ, ಮನೆಗೆ ತಲುಪಿಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯ ಕುರಿತು ಗುರುವಾರ ರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಸ್ಥಳೀಯ ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹಲ್ಲೆಯಿಂದ ಹುಸೇನ್ ಸಾಬ್ ಅವರ ಮೇಲೆ ಆಗಿರುವ ಗಾಯಗಳ ವಿಡಿಯೋ ಮಾಡಿಕೊಂಡಿದ್ದಾರೆ.





