ಬೆಳಗಾವಿ | 5 ವರ್ಷದಲ್ಲಿ ವಸತಿ ಶಾಲೆಗಳ 92 ಮಂದಿ ವಿದ್ಯಾರ್ಥಿಗಳ ಆತ್ಮಹತ್ಯೆ

Date:

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಎಸ್‌)ಯಿಂದ ನಡೆಸುತ್ತಿರುವ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ಪೈಕಿ 29 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲವು ವಿದ್ಯಾರ್ಥಿಗಳು ಮನೆಗೆ ಹಿಂದಿರುಗುವಾಗ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಧಾನಸಭೆಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಸಲ್ಲಿಸಿದ 2023-24ರ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

ಬೆಳಗಾವಿ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ವರದಿಯಲ್ಲಿ ತಿಳಿಸಿದ್ದು, ಇಂತಹ ಸಾವುಗಳ ಬಗ್ಗೆ ವಿವರವಾದ ತನಿಖೆಯ ಅಗತ್ಯವನ್ನು ಒತ್ತಿ ಹೇಳಿದ ಸಮಿತಿಯು, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವು ತನಿಖೆಯನ್ನು ನಡೆಸಿದೆಯೇ ಎಂಬ ಬಗ್ಗೆ ಪೋಷಕರಿಂದ ಮಾಹಿತಿಯನ್ನು ಪಡೆಯುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಯಾವುದೇ ತನಿಖೆ ನಡೆಸದಿದ್ದರೆ, ಸರ್ಕಾರವು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕೆಂದು ಸಮಿತಿ ಹೇಳಿದೆ.

ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ವಿಶೇಷ ಸಮಾಲೋಚನೆ ಅಧಿವೇಶನಗಳನ್ನು ನಡೆಸುವಂತೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ನೀಡಲಾದ 2.5 ಲಕ್ಷ ಕೋಟಿ ರೂ.ಗಳಲ್ಲಿ ಅವರಿಗೆ ಎಷ್ಟು ತಲುಪಿದೆ ಎಂಬ ಪ್ರಶ್ನೆಗಳನ್ನು ಸಮಿತಿಯು ಎತ್ತಿದ್ದು, ಈ ಹಣವನ್ನು ಸರಿಯಾಗಿ ಬಳಸುವುದನ್ನು ಖಚಿತಪಡಿಸಿಕೊಳ್ಳಲು ಹೊಸ ಕಾರ್ಯವಿಧಾನವನ್ನು ಕೋರಿದೆ.

“ಕರ್ನಾಟಕದಲ್ಲಿ 1.8 ಕೋಟಿ ಎಸ್‌ಸಿ/ಎಸ್‌ಟಿಗಳಿದ್ದಾರೆ. 2013 ರಿಂದ, ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಅಡಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಸರ್ಕಾರ 2.5 ಲಕ್ಷ ಕೋಟಿ ರೂ. ಹಣ ನೀಡಿದೆ. ಆದರೆ, ಆ ಹಣ ಅವರಿಗೆ ತಲುಪುತ್ತಿಲ್ಲ. ಈ ಹಣವನ್ನು ಸರಿಯಾಗಿ ಬಳಸಿಕೊಳ್ಳುವಂತೆ ನೋಡಿಕೊಳ್ಳಲು ಹೊಸ ಕಾರ್ಯವಿಧಾನದ ಅಗತ್ಯವಿದೆ” ಎಂದು ವರದಿ ಹೇಳಿದೆ.

“ನಕಲಿ ಎಸ್‌ಸಿ/ಎಸ್‌ಟಿ ಜಾತಿ ಪ್ರಮಾಣ ಪತ್ರಗಳ ಸಮಸ್ಯೆ ಅವ್ಯಾಹತವಾಗಿ ಮುಂದುವರೆದಿದ್ದು, 175 ತಹಶೀಲ್ದಾರ್‌ಗಳು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕುರುಬರು, ಬ್ರಾಹ್ಮಣರು, ವೀರಶೈವರು, ಮುದಲಿಯಾರುಗಳು ಮತ್ತು ಇತರರು ಎಸ್‌ಸಿ/ಎಸ್‌ಟಿ ಪ್ರಮಾಣಪತ್ರಗಳನ್ನು ಪಡೆದಿದ್ದಾರೆ” ಎಂದು ವರದಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಕೀಲನ ಬರ್ಬರ ಹತ್ಯೆ; ಆರೋಪಿಗಳಿಗಾಗಿ ಶೋಧ

206 ಶಾಲೆಗಳಲ್ಲಿ ಕೇವಲ 93 ಮಹಿಳಾ ವಾರ್ಡನ್‌ಗಳು ಮಾತ್ರ ಬಾಲಕಿಯರಿಗೆ ಲಭ್ಯರಿದ್ದಾರೆ ಎಂದು ಸಮಿತಿಯು ಕೆಆರ್‌ಇಐಎಸ್ ಶಾಲೆಗಳಲ್ಲಿ ಬಾಲಕಿಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪ್ರತಿ ಶಾಲೆಗೆ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಿಸುವಂತೆ ಸಮಿತಿ ಸರ್ಕಾರವನ್ನು ಕೋರಿದೆ.

“ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಲವಾರು ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಭಯಾನಕ ಸ್ಥಿತಿಯಲ್ಲಿವೆ. ಸರಿಯಾದ ಶೌಚಾಲಯಗಳು ಮತ್ತು ಸ್ನಾನಗೃಹಗಳಿಲ್ಲದೆ, ವಿದ್ಯಾರ್ಥಿಗಳು ಬಯಲಿನಲ್ಲಿ ಸ್ನಾನ ಮಾಡುತ್ತಿದ್ದಾರೆ” ಎಂದು ಸಮಿತಿಯ ವರದಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...