ಕೆಎಸ್‌ಆರ್‌ಟಿಸಿ ಕಚೇರಿಗೆ ಜರ್ಮನಿಯ ಫೆಡರಲ್ ಸಚಿವಾಲಯದ ಉನ್ನತಾಧಿಕಾರಿಗಳ ನಿಯೋಗ ಭೇಟಿ

Date:

ಜರ್ಮನಿ ಸರ್ಕಾರದ ಫೆಡರಲ್ ಸಚಿವಾಲಯ ಇಕಾನಾಮಿಕ್ ಕೋಆಪರೇಶನ್ ಅಂಡ್ ಡೆವಲಪ್ಮೆಂಟ್ (BMZ)ನ ಉನ್ನತ ಮಟ್ಟದ ನಿಯೋಗವು ತಮ್ಮ ಭಾರತದ ಪ್ರವಾಸದ ಭಾಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭೇಟಿ ನೀಡಿ, ಕೆಎಸ್‌ಆರ್‌ಟಿಸಿಯ ಕಾರ್ಯವೈಖರಿಗಳ ಬಗ್ಗೆ ಖುದ್ದು ಮಾಹಿತಿ ಪಡೆದುಕೊಂಡರು.

ನಿಯೋಗದ ಸದಸ್ಯರು ದೃಷ್ಟಿ ದೋಷ ಹೊಂದಿದ ಪ್ರಯಾಣಿಕರ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ ಸಹಾಯಕ ಧ್ವನಿ-ನೇವಿಗೇಶನ್ ಪರಿಹಾರ ‘ಧ್ವನಿ ಸ್ಪಂದನ –ಆನ್‌ಬೋರ್ಡ್’ ಬಗ್ಗೆ ಮಾಹಿತಿ ಪಡೆದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷಾರವರು ಧ್ವನಿ ಸ್ಪಂದನ ಯೋಜನೆಯ ಕುರಿತು ವಿವರವಾಗಿ ಮಾಹಿತಿ ನೀಡಿ, ಈ ಯೋಜನೆಗೆ ಭಾರತದ ಸರ್ಕಾರದಿಂದ ದೊರೆತ ಪ್ರಶಸ್ತಿಯನ್ನು ತೋರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಯೋಗದಲ್ಲಿ ಬಿಎಂಝೆಡ್‌ನ ಮಾನ್ಯ ಮಹಾ ನಿರ್ದೇಶಕಿ ಮಿಸ್. ಕ್ರಿಸ್ಟೀನ್ ಟೋಟ್‌ಝ್ಕೆ, ಮಿಸ್. ಬಾರ್ಬರಾ ಶಾಫರ್ ಮತ್ತು ಶ್ರೀ ಕ್ರಿಸ್ಟೋಫ್ ವಾನ್ ಸ್ಟೆಕೋವ್ ಉಪಸ್ಥಿತರಿದ್ದರು. ರೈಸ್‌ಡ್ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿದ ಮತ್ತು GIZ ನ ಗ್ರೀನ್ ಅರ್ಬನ್ ಮೊಬಿಲಿಟಿ ಇನೋವೇಶನ್ ಮುಂದಾಳತ್ವದಲ್ಲಿ ವಿಸ್ತರಿಸಲ್ಪಟ್ಟ ಆನ್‌ಬೋರ್ಡ್ ವ್ಯವಸ್ಥೆಯ ಜಾರಿಗೆ ಸಂಬಂಧಿಸಿದ ಮಾಹಿತಿಯನ್ನು ಅವರಿಗೆ ನೀಡಲಾಯಿತು.

WhatsApp Image 2025 12 02 at 2.15.02 PM

ಈ ಭೇಟಿಯ ಸಂದರ್ಭದಲ್ಲಿ, ಬಿಎಂಝೆಡ್‌ನ ನಿಯೋಗವು ಮೈಸೂರು ನಗರ ಬಸ್‌ಗಳಲ್ಲಿ ಕಾರ್ಯಾಚರಣೆಯಲ್ಲಿ ಇರುವ ಸಾಧನವನ್ನು ನೇರವಾಗಿ ಅನುಭವಿಸಿ, ಒಳಗೊಂಡಿರುವ ಎಲ್ಲ ವರ್ಗಗಳಿಗೂ ಅನುಕೂಲವಾಗುವ ಸಂಚಾರ ವ್ಯವಸ್ಥೆ ನಿರ್ಮಾಣದ ನಿಗಮದ ಬದ್ಧತೆಯನ್ನು ಮೆಚ್ಚಿದರು. ಬಳಕೆದಾರ ಕೇಂದ್ರೀಕೃತ, ನವೀನ ಹಾಗೂ ಸುಲಭ ಪ್ರವೇಶದ ಮೊಬಿಲಿಟಿ ಸಂಚಾರ ಪರಿಹಾರಗಳನ್ನು ಅಳವಡಿಸುವಲ್ಲಿ ನಿಗಮವು ತೋರಿದ ನಾಯಕತ್ವವನ್ನು ಪ್ರಶಂಸಿಸಿ, ಮೈಸೂರು ನಗರ ಸಾರಿಗೆಯ ಈ ವ್ಯವಸ್ಥೆಯನ್ನು ಮುಂದುವರಿಸಿರುವುದಕ್ಕಾಗಿ ಅಭಿನಂದಿಸಿದರು.

ಭೇಟಿಯ ವೇಳೆ ನವದೆಹಲಿಯಲ್ಲಿರುವ ಜರ್ಮನ್ ರಾಯಭಾರ ಕಚೇರಿಯ ಅಧಿಕಾರಿಗಳಾದ ಗೊಟ್‌ಫ್ರೈಡ್ ವಾನ್ ಗೆಮಿಂಗನ್, ಪಾಮೇಲಾ ಬೈಜಲ್, ಜೋಹಾನ್ಸ್ ಶ್ನೈಡರ್, ಶೀನಂ ಪುರಿ, ಜಾಸ್ಮಿನ್ ಕೌರ್ ಹಾಗೂ ಜಿಐಝಡ್ ದೇಶ ನಿರ್ದೇಶಕಿ ಮಿಸ್. ಜುಲಿ ರೆವಿಯರ್ ಉಪಸ್ಥಿತರಿದ್ದರು.

WhatsApp Image 2025 12 02 at 2.15.00 PM
WhatsApp Image 2025 12 02 at 2.15.04 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...