ಮರೆಯಾದ ನಿಷ್ಠಾವಂತ ರಾಜಕಾರಣಿ ಎಚ್‌ ವೈ ಮೇಟಿ: ಸಿಎಂ ಸಿದ್ದರಾಮಯ್ಯ

Date:

ನಿಷ್ಠಾವಂತ ರಾಜಕಾರಣಿಯಾಗಿದ್ದ ಎಚ್‌ ವೈ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಚ್‌ ವೈ ಮೇಟಿ ಅವರು ನಿಧನರಾದ ಬೆಂಗಳೂರಿನ ಜಯನಗರ ಖಾಸಗಿ ಆಸ್ಪತ್ರೆಗೆ ಆಗಮಿಸಿ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

“ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಪರ ಕಾಳಜಿಯ ಸೇವೆ

“ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. 1989 ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು” ಎಂದು ಹೇಳಿದರು.

ನಾಳೆ ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

“ಜನರೊಂದಿಗೆ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅಂತಹ ನಿಷ್ಠಾವಂತ ನಾಯಕನೊಬ್ಬನ ಸಾವು ದುಃಖ ತಂದಿದ್ದು, ಇದು ನನಗೆ ವೈಯಕ್ತಿಕ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ , ಅಭಿಮಾನಗಳಿಗೂ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. ಇಂದು ಸಂಜೆಯ ತನಕ ಬೆಂಗಳೂರಿನ ಕುಟುಂಬದವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಿ, ನಂತರ ಬಾಗಲಕೋಟೆಗೆ ತೆರಳಲಾಗುವುದು. ನಾಳೆ ಎರಡು ಗಂಟೆಯ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯುವ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವೆ” ಎಂದು ಮುಖ್ಯಮಂತ್ರಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...