ವಿದ್ಯುತ್ ಖರೀದಿ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ಸಭೆ

Date:

ಮಳೆ ಕಡಿಮೆಯಾಗುವುದರಿಂದ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 90೦0 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1,500೦ ರಿಂದ 1,60೦0 ಮೆ.ವ್ಯಾಟ್ ಗರಿಷ್ಠ ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ಅನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಸಭೆ ಕರೆಯಲಾಗಿದೆ” ಎಂದರು.

“ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಆದೇಶ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ. ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಹೇಳಿದ್ದ ಹಸಿ ಸುಳ್ಳು-‘ನಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ’

“ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...