ಡಿಕೆ ಶಿವಕುಮಾರ್ ಸವಾಲನ್ನು ಸ್ವೀಕರಿಸಿದ್ದೇನೆ: ಮಾಜಿ ಸಿಎಂ ಕುಮಾರಸ್ವಾಮಿ

Date:

  • ನಾನೇನು ಕದ್ದು ಓಡಿ ಹೋಗಿ, ಪಲಾಯನ ಮಾಡಲ್ಲ: ಎಚ್‌ಡಿ ಕುಮಾರಸ್ವಾಮಿ
  • ‘ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತು ಎಂತಹದ್ದು ಎಂಬುದು ಕಂಡಿದ್ದೇನೆ’

ರಾಮನಗರ ಜಿಲ್ಲೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಹಿರಂಗ ಚರ್ಚೆಗೆ ಕರೆದಿರುವ ಸವಾಲನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ನಾನೇನು ಕದ್ದು ಓಡಿ ಹೋಗಿ, ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ವಿಜಯದಶಮಿಯ ಆಸುಪಾಸಿನಲ್ಲಿ ಹಬ್ಬದ ಆಚರಣೆ ಜೊತೆಗೆ ಸಿಎಂ ಹಾಗೂ ಡಿಸಿಎಂ ವೈಯಕ್ತಿಕವಾಗಿ ನನ್ನ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಅದಕ್ಕೆ ಸಂಬಂಧಪಟ್ಟ ಎರಡು ಮೂರು ವಿಚಾರಗಳಿಗೆ ಡಿಸಿಎಂ ನನಗೆ ಸವಾಲು ಹಾಕಿದ್ದಾರೆ. ಅದಕ್ಕೆ ನಾನು ಚರ್ಚೆಗೆ ಸಿದ್ದನಿದ್ದೇನೆ. ನಾನು ಸ್ವೀಕಾರ ಮಾಡುತ್ತೇನೆ” ಎಂದರು.

“ಇವತ್ತಿನ ಆರ್ಥಿಕ ಪರಿಸ್ಥಿತಿಗೆ ಹಿಂದಿನ ಬಿಜೆಪಿ ಕಾರಣ ಎಂದು ಸಿಎಂ ಹೇಳಿದ್ದಾರೆ. ಇದಕ್ಕೆ ಶ್ವೇತ ಪತ್ರ ಹೊರಡಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಸ್ವಾಗತ ಮಾಡುತ್ತೇನೆ. ಅವರು ಕೊಟ್ಟಂತಹ ತೀರ್ಮಾನಗಳ ಆಧಾರದ ಮೇಲೆ ಬಿಜೆಪಿ ಸರ್ಕಾರ ನಡೆದಿದೆ. ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತು ಎಂತಹದ್ದು ಎಂಬುದು ನೋಡಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ

ನಾನು ರಾಜಕೀಯದ ಖಳನಾಯಕ

“ಸಿದ್ದರಾಮಯ್ಯ ಅವರಿಗೆ ನಾನು ಸ್ನೇಹಿತನಾಗಲು ಸಾಧ್ಯವೇ? ಅವರು ಹೇಳಿದ ಹಾಗೇ ಸಿದ್ದರಾಮಯ್ಯ ಅವರಿಗೆ ನಾನು ರಾಜಕೀಯ ವಿಲನ್‌ ಹೌದು. ಸಿದ್ದರಾಮಯ್ಯ ಅವರ ತಪ್ಪುಗಳನ್ನು ಜನರ ಎದುರು ಇಡುತ್ತಿದ್ದೇನೆ. ಮಾತು ಎತ್ತಿದರೆ ಸಾಕು ವೆಸ್ಟ್‌ ಎಂಡ್‌ ಹೋಟೆಲ್‌ ಎನ್ನುತ್ತಾರೆ ಸಿದ್ದರಾಮಯ್ಯ. ನಾನು ಆ ಹೋಟೆಲ್‌ನಲ್ಲಿ ಇದ್ದುಕೊಂಡು ಏನೆಲ್ಲ ಕಾರ್ಯಕ್ರಮ ಮಾಡಿದ್ದೇನೆ ಎಂಬುದು ದಾಖಲೆ ಸಮೇತ ಹೇಳುವೆ” ಎಂದರು.

“ಕುಮಾರಸ್ವಾಮಿ ಅವರ ಅನುದಾನದಿಂದ ನಮ್ಮ ಮುಖ ಕ್ಷೇತ್ರದಲ್ಲಿ ಉಳಿದಿದೆ ಎಂದು ಕೆಲವು ಕಾಂಗ್ರೆಸ್‌ ಶಾಸಕರೇ ಹೇಳುತ್ತಿದ್ದಾರೆ. ಈಗ ಅವರು ಸೋತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಡಿಕೆ ಶಿವಕುಮಾರ್‌ ಅವರು ನನ್ನನ್ನು ಕೈಗೊಂಬೆಯಾಗಿ ನಡೆಸಿಕೊಂಡಿದ್ದಾರೆ. ಮನವಿ ಪತ್ರಗಳನ್ನು ನನ್ನ ಟೇಬಲ್‌ ಮೇಲೆ ಎಸೆದು ಅವಮಾನ ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...