ಭ್ರಷ್ಟಾಚಾರ ಸಾಬೀತು: ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಲೋಕಾಯುಕ್ತ ಪತ್ರ

Date:

ಕರ್ನಾಟಕ ಲೋಕಾಯುಕ್ತ ಅಧಿಕಾರಿಯಿಂದಲೇ ಭ್ರಷ್ಟಾಚಾರ ಪ್ರಕರಣ ಇದೀಗ ಸಾಬೀತಾಗಿದ್ದು, ಕ್ರಮಕ್ಕೆ ಶಿಫಾರಸು ಮಾಡಿರುವುದಾಗಿ ಲೋಕಾಯುಕ್ತ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರು ನಗರ ಎಸ್​ಪಿಯಾಗಿದ್ದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಹಾಗೂ ಕಾನ್ಸ್‌ಟೇಬಲ್ ನಿಂಗಪ್ಪ ಅಕ್ರಮವೆಸಗಿರುವುದು ದೃಢಪಟ್ಟಿದೆ. ಇವರಿಬ್ಬರೂ ಅಬಕಾರಿ, ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದಾರೆ ಎಂದು ಲೋಕಾಯುಕ್ತ ತಿಳಿಸಿದೆ. ಶ್ರೀನಾಥ್ ಜೋಷಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಲೋಕಾಯುಕ್ತ ಸಂಸ್ಥೆಯ ಹೆಸರು ದುರ್ಬಳಕೆ ಮಾಡಿಕೊಂಡು ಹಣ ಪಡೆದ ಬಗ್ಗೆ ರಹಸ್ಯ ಮಾಹಿತಿ ದೊರೆತ ಕೂಡಲೇ ಲೋಕಾಯುಕ್ತರು ಸಂಸ್ಥೆಯ ಪೊಲೀಸ್ ಅಧೀಕ್ಷಕರಿಗೆ ತನಿಖೆಗೆ ಆದೇಶಿಸಿದ್ದರು. ಅದರನ್ವಯ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ನಡೆಸಿದ ತನಿಖೆಯಲ್ಲಿ ಶ್ರೀನಾಥ್ ಜೋಷಿ ಹಾಗೂ ಮಾಜಿ ಕಾನ್ಸ್‌ಟೇಬಲ್ ನಿಂಗಪ್ಪ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವುದು ದೃಢಪಟ್ಟಿದೆ.

ಪ್ರಕರಣ ಸಂಬಂಧ ಮಾಜಿ ಕಾನ್ಸ್‌ಟೇಬಲ್ ನಿಂಗಪ್ಪ ಅಲಿಯಾಸ್ ನಿಂಗಪ್ಪ ಸಾವಂತನನ್ನು ಬಂಧಿಸಲಾಗಿದೆ ಎಂಬುದಾಗಿಯೂ ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

ಶ್ರೀನಾಥ್ ಜೋಷಿ ಹಾಗೂ ನಿಂಗಪ್ಪ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ‘‘ಕೆಜಿ’’ ಎಂಬ ಕೋಡ್ ವರ್ಡ್ ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದುದು ತನಿಖೆಯಿಂದ ದೃಢಪಟ್ಟಿದೆ ಎಂದು ಲೋಕಾಯುಕ್ತ ತಿಳಿಸಿದೆ. ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದ್ದು, ನಿಂಗಪ್ಪ ಕ್ರಿಪ್ಟೋ ಕರೆನ್ಸಿಯಲ್ಲಿ 4.92 ಕೋಟಿ ರೂ. ಹೂಡಿಕೆ ಮಾಡಿದ್ದರು ಎಂಬುದನ್ನೂ ಲೋಕಾಯುಕ್ತ ತಿಳಿಸಿದೆ.

ಸರ್ಕಾರಿ ಅಧಿಕಾರಿಗಳನ್ನು ಬೆದರಿಕೆ ಮಾಡಿ ಹಣ ವಸೂಲಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪರನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ, ಲೋಕಾಯುಕ್ತ ಎಸ್​​ಪಿಯಾಗಿದ್ದ ಶ್ರೀನಾಥ್ ಜೋಷಿ ಜತೆ ನಿರಂತರ ಸಂಪರ್ಕದಲ್ಲಿ ಇದ್ದ ವಿಚಾರ ತಿಳಿದುಬಂದಿತ್ತು. ಶ್ರೀನಾಥ್ ಜೋಷಿ ಜತೆ ಸಂಪರ್ಕದಲ್ಲಿದ್ದುಕೊಂಡೇ ನಿಂಗಪ್ಪ ಸರ್ಕಾರಿ ಅಧಿಕಾರಿಗಳನ್ನು ಹೆದರಿಸಿ ಅವರಿಂದ ಹಣ ಪಡೆದಿದ್ದರು ಎಂದು ಲೋಕಾಯುಕ್ತ ತಿಳಿಸಿದೆ.

ಶ್ರೀನಾಥ್ ಜೋಷಿ ಹಾಗೂ ನಿಂಗಪ್ಪ ವಾಟ್ಸ್​ಆ್ಯಪ್ ಮೂಲಕ ಕರೆ ಮಾಡುತ್ತಿದ್ದು, ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದರು. ಆ ಕುರಿತ ಸಾಕ್ಷ್ಯಗಳನ್ನೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಲೋಕಾಯುಕ್ತ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...