ಪವಿತ್ರ ಪೂಜೆಯಲ್ಲೂ ಹೊಲಸು ಮಾಡುವುದೇ ಪ್ರಶಾಂತ್‌ ಸಂಬರಗಿ ಕೆಲಸ: ನಟ ಪ್ರಕಾಶ್‌ ರೈ ತಿರುಗೇಟು

Date:

‘ಸುಳ್ಳ ರಾಜ’ನ ಹೇಡಿಗಳ ಸೈನ್ಯಕ್ಕೆ … ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ ಎಂದು ಬಲಪಂಥೀಯ ವಿಚಾರಗಳನ್ನು ಪ್ರತಿಪಾದಿಸುವ ಪ್ರಶಾಂತ್‌ ಸಂಬರಗಿಗೆ ನಟ ಪ್ರಕಾಶ್‌ ರೈ ತಿರುಗೇಟು ನೀಡಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರೈ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಚಿತ್ರವನ್ನು ಪ್ರಶಾಂತ್‌ ಸಂಬರಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ‘ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ,” ಎಂದು ಬರೆದುಕೊಂಡಿದ್ದರು.

ಸಂಬರಗಿ ಪೋಸ್ಟ್‌ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಪ್ರಕಾಶ್‌ ರೈ, “ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕಾಶ್‌ ರೈ ಚಿತ್ರ ಎಐನಿಂದ ರಚಿಸಿದ್ದಾಗಿದೆ. ಎಐ ಚಿತ್ರಗಳನ್ನು ಕಂಡು ಹಿಡಿಯುವ ‘ಸೈಟ್‌ ಎಂಜಿನ್‌’ನಲ್ಲಿ ಮೊದಲಿಗೆ ಈ ಚಿತ್ರವನ್ನು ಪರಿಶೀಲನೆಗೆ ಒಳಪಡಿಸಿದಾಗ ಇದು ಶೇ. 92ರಷ್ಟು ಜರನೇಟಿವ್‌ ಎಐ ಬಳಸಿ ರಚಿಸಿದ ಚಿತ್ರ ಎಂದು ‘ಸೈಟ್‌ ಇಂಜಿನ್‌’ ಫಲಿತಾಂಶ ತೋರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...