ಆಡಳಿತ ಸುಧಾರಣಾ ಆಯೋಗದ 10ನೇ ವರದಿ ಸಲ್ಲಿಕೆ

Date:

ಆಡಳಿತ ಸುಧಾರಣಾ ಆಯೋಗ-2ರಲ್ಲಿನ ಎಲ್ಲ ಶಿಫಾರಸುಗಳ ಪಾಲನೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಪ್ರತ್ಯೇಕ ‘ಸುಧಾರಣಾ ಮೇಲ್ವಿಚಾರಣಾ ಘಟಕ’ವನ್ನು ಸ್ಥಾಪಿಸುವುದು ಸೇರಿದಂತೆ ಒಟ್ಟು 354 ಶಿಫಾರಸುಗಳನ್ನು ಮಾಡಲಾಗಿದೆ ಎಂದು ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರೂ ಆಗಿರುವ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರದಿ ಸಲ್ಲಿಕೆ ಬಳಿಕ ಇಲ್ಲಿನ ವಿಕಾಸಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆಡಳಿತ ಸುಧಾರಣಾ ಆಯೋಗ-1 ಮತ್ತು ಆಯೋಗ-2 ಒಟ್ಟು 10 ವರದಿಗಳ ಮೂಲಕ 42 ಇಲಾಖೆಗಳಿಗೆ ಸಂಬಂಧಿಸಿದಂತೆ 6 ಸಾವಿರಕ್ಕೂ ಹೆಚ್ಚು ಶಿಫಾರಸುಗಳನ್ನು ನೀಡಿವೆ. ನಾನು 2024ನೆ ಮೇ ತಿಂಗಳಿನಲ್ಲಿ 8ನೆ ವರದಿಯನ್ನು 2025ನೆ ಅಕ್ಟೋಬರ್ ತಿಂಗಳಿನಲ್ಲಿ 9ನೆ ವರದಿಯನ್ನು ಮತ್ತು ಡಿಸೆಂಬರ್ ನಲ್ಲಿ 10ನೆ ವರದಿಯನ್ನು ಒಟ್ಟಾರೆ 3 ವರದಿಗಳನ್ನು ಸಲ್ಲಿಸಿದ್ದೇನೆ. ಈ ಮೂರು ವರದಿಗಳು ಒಟ್ಟು 992 ಶಿಫಾರಸುಗಳನ್ನು ಒಳಗೊಂಡಿವೆ ಎಂದರು.

10ನೆ ವರದಿಯನ್ನು ಸಲ್ಲಿಸುವುದರೊಂದಿಗೆ ಆಡಳಿತ ಸುಧಾರಣಾ ಆಯೋಗ-2 ತನ್ನ ಕಾರ್ಯವನ್ನು ಪೂರ್ಣಗೊಳಿಸಿದೆ. ಸುಧಾರಣೆಗಳ ಪ್ರಯೋಜನಗಳು ಜನಸಾಮಾನ್ಯರಿಗೆ ತಲುಪುವಂತೆ ಮಾಡಲು ಮತ್ತು ಆಡಳಿತ ಸುಧಾರಣೆಯ ನಿರಂತರತೆಯನ್ನು ಕಾಪಾಡಲು ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಾದರೂ ಪ್ರೀತಿ ಬಿತ್ತೋಣ, ಮಾನವೀಯತೆ ಮೆರೆಯೋಣ…

ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆ ಇಲಾಖಾವಾರು ತ್ರೈಮಾಸಿಕ ಪರಿಶೀಲನೆಯನ್ನು ಕಡ್ಡಾಯಗೊಳಿಸಬೇಕು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ‘ವಾರ್ಷಿಕ ಉನ್ನತ ಮಟ್ಟದ ಹೊಣೆಗಾರಿಕೆ’ಯನ್ನು ನಿಗದಿಪಡಿಸಲಾಗಿದೆ. ಇದರಿಂದ ಇಲಾಖೆಗಳು ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಪ್ರಮುಖ ಶಿಫಾರಸುಗಳು:

  • ಶೂನ್ಯ ಅಥವಾ ಅತ್ಯಲ್ಪ ಹಂಚಿಕೆ ಹೊಂದಿರುವ ಅಥವಾ ಕೇವಲ ಲೆಕ್ಕಪತ್ರ/ಸಾಲ ನಿರ್ವಹಣೆ ಉದ್ದೇಶಕ್ಕಾಗಿ ಇರುವ ಸುಮಾರು ಒಂದು ಸಾವಿರ ನಿಷ್ಕ್ರಿಯ ಯೋಜನೆಗಳನ್ನು ಮುಕ್ತಾಯಗೊಳಿಸುವುದು ಅಥವಾ ವಿಲೀನಗೊಳಿಸುವುದು.
  • 1 ಕೋಟಿ ರೂ.ಗಳಿಗಿಂತ ಕಡಿಮೆ ಅನುದಾನ ಹೊಂದಿರುವ 280 ಲೆಕ್ಕ ಶೀರ್ಷಿಕೆಗಳು/ಯೋಜನೆಗಳ ಜಂಟಿ ಪರಿಶೀಲನೆಯನ್ನು ಕಾಲಮಿತಿಯೊಳಗೆ ಕೈಗೊಂಡು, ಕಾರ್ಯಸಾಧ್ಯವಲ್ಲದ ಯೋಜನೆಗಳನ್ನು ಮುಚ್ಚುವುದು ಅಥವಾ ವಿಲೀನಗೊಳಿಸುವುದು.
  • ಇಲಾಖೆಗಳ ಕಾರ್ಯನಿರ್ವಹಣೆಯ ಅಗತ್ಯತೆಗಳಿಗೆ ಅನುಗುಣವಾಗಿ, ಬಳಕೆಯಲ್ಲಿಲ್ಲದ ಗುಮಾಸ್ತ ಹುದ್ದೆಗಳನ್ನು ತಾಂತ್ರಿಕ ಅಥವಾ ಬಹು-ಕಾರ್ಯ ನಿರ್ವಹಣಾ ಹುದ್ದೆಗಳನ್ನಾಗಿ ಪರಿವರ್ತಿಸುವುದು.
  • ವೃಂದ ಮತ್ತು ನೇಮಕಾತಿ ನಿಯಮಗಳ ಪರಿಶೀಲನೆಯ ಮೂಲಕ ಅಪ್ರಸ್ತುತ ಮತ್ತು ಕಾರ್ಯನಿರ್ವಹಣೆಗೆ ಅಗತ್ಯವಿಲ್ಲದ ಹುದ್ದೆಗಳನ್ನು ರದ್ದುಪಡಿಸುವುದು.
  • ಮಂಜೂರಾದ ಖಾಯಂ ಹುದ್ದೆಗಳಿದ್ದೂ ಅವು ಭರ್ತಿಯಾಗದೆ ಬಾಕಿ ಇರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಲ್ಲಿ ಇನ್ನು ಮುಂದೆ ಹೊರಗುತ್ತಿಗೆ ನೇಮಕಾತಿಯನ್ನು ಸ್ಥಗಿತಗೊಳಿಸುವುದು.
  • ಒಂದು ವರ್ಷಕ್ಕೂ ಹೆಚ್ಚು ಕಾಲ ಖಾಲಿ ಇರುವ ಮುಂಚೂಣಿ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡುವುದು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...