ಭತ್ತ ಸಂಶೋಧನೆ: ಫಿಲಿಪೈನ್ಸ್ ನೊಂದಿಗೆ ಮಹತ್ವದ ಒಡಂಬಡಿಕೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸಹಿ

Date:

ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಫೈನ್ಸ್‌ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.

ಫಿಲಿಪೈನ್ಸ್‌ನ ಮನಿಲಾದಲ್ಲಿರುವ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವರಾದ ಎನ್‌ ಚಲುವರಾಯಸ್ವಾಮಿ ಅವರು ಒಪ್ಪಂದಕ್ಕೆ ಸಹಿ ಮಾಡಿದರು.

ರಾಜ್ಯದಲ್ಲಿ ನೆರೆ ಹಾವಳಿ, ಬರ ಪರಿಸ್ಥಿತಿ ಗಳು ಕರಾವಳಿ,‌ ಮಲೆನಾಡು ಬಯಲು ಸೀಮೆ ವಿಭಿನ್ನ ಭೌಗೋಳಿಕ ಪರಿಸರಕ್ಕೆ ಹೊಂದಾಣಿಕೆಯಾಗುವ ವಿವಿಧ ಜೈವಿಕ, ಅಜೈವಿಕ ಒತ್ತಡಗಳಿಗೆ ನಿರೋಧಕತೆ ಜೊತೆಗೆ ಪೌಷ್ಠಿಕಾಂಶ ಉಳ್ಳ, ಅಧಿಕ ಇಳುವರಿ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ತಳಿಗಳ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿಯೂ ಅಂತಾರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಮಹತ್ವದ ಚರ್ಚೆ ನಡೆಸಿದರು.

ಅಲ್ಲದೆ ಭತ್ತದ ಮಹತ್ವ, ಉಭಯ ದೇಶಗಳು ಅನುಸರಿಸುತ್ತಿರುವ ಬೇಸಾಯ ಕ್ರಮಗಳು, ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಹಾಗೂ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಭತ್ತದ ತಳಿಗಳ ಸಂರಕ್ಷಣೆ‌, ಸಂಶೋಧನೆಗೆ ಕರ್ನಾಟಕ ಸರ್ಕಾರ ತೋರುತ್ತಿರುವ ಕಾಳಜಿ ಮತ್ತು ರೈತ ಪರ‌ ಯೋಜನೆಗಳ ಬಗ್ಗೆ ಫಿಲಿಪೈನ್ಸ್‌ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ಸೂಚಿಸಿ ಇದಕ್ಕೆ ಕಾರಣರಾಗಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

1945ರಿಂದಲೂ ಭಾರತ ಮತ್ತು ಫಿಲಿಪೈನ್ಸ್ ನಡುವೆ ಇರುವ ಬಾಂಧವ್ಯ, ಕೃಷಿ ಕ್ಷೇತ್ರದ ಸಹಕಾರಗಳನ್ನು ಸಹ ಸ್ಮರಿಸಿ, ಶ್ಲಾಘಿಸಲಾಯಿತು.

ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಉಪ ಮಹಾ ನಿರ್ದೇಶಕರಾದ ಜುನೆಲ್ ಸಯಾನೋ, ಡಾ ಸಂಕಲ್ಪ್ ಭೋಸ್ಲೆ, ಮಂಡ್ಯ ಕೃಷಿ ವಿ.ವಿ ವಿಶೇಷಾಧಿಕಾರಿ ಡಾ ಕೆ.ಎಂ ಹರಿಣಿ‌ಕುಮಾರ್, ಡಾ‌‌.ವೇಣು ಪ್ರಸಾದ್, ಡಾ. ಮಲ್ಲಿಕಾರ್ಜುನ ಸ್ವಾಮಿ,ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ ಎ.ಬಿ‌.ಪಾಟೀಲ್, ವಿ.ಸಿ ಫಾರಂನ ಭತ್ತದ ತಳಿ ವಿಜ್ಞಾನಿ ಡಾ ದೀಪಕ್,ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಡಾ ಸುಜಯ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳ ತಂಡದೊಂದಿಗೆ ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜೀನ್ ಬ್ಯಾಂಕ್ ಒಳಗೊಂಡಂತೆ ವಿವಿಧ ಪ್ರಯೋಗಾಲಯಗಳು ಮತ್ತು ತಾಲೂಕುಗಳಿಗೆ ಭೇಟಿ ನೀಡಿ‌ ಮಾಹಿತಿ ಪಡೆದುಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...