ಕಸವಿಂಗಡನೆಗೂ ಎಐ | ತ್ಯಾಜ್ಯ ವಿಲೇವಾರಿಗೆ ಬೆಂಗಳೂರು ಕಂಪನಿಯಿಂದ ಹೊಸ ಪರಿಹಾರ

Date:

ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕಾದರೆ ಮೂಲದಲ್ಲೇ ಕಸ ವಿಂಗಡಣೆಯಾಗಬೇಕು. ಆ ನಿಟ್ಟಿನಲ್ಲಿ ಹಸಿ ಕಸ ಹಾಗೂ ಒಣ ಕಸವನ್ನು ಪ್ರತ್ಯೇಕಿಸಬೇಕೆಂದು ಜಾಗೃತಿ ಪ್ರಚಾರ ನಡೆಸುತ್ತಿದ್ದರೂ ಅದು ನಿರೀಕ್ಷಿತ ಫಲ ನೀಡುತ್ತಿಲ್ಲ. ಅದಕ್ಕಾಗಿಯೇ ಈಗ ಬಂದಿದೆ ಎಐ ಆಧಾರಿತ ಕಸದ ಬುಟ್ಟಿ.

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಟೆಕ್ ಸಮಿಟ್-2025ರ ವಸ್ತುಪ್ರದರ್ಶನದಲ್ಲಿ ಇದು ಗಮನ ಸೆಳೆದಿದೆ.

ಈ ಎಐ ಆಧಾರಿತ ಕಸದ ಬುಟ್ಟಿ ಯಂತ್ರದಲ್ಲಿ 6 ಬುಟ್ಟಿಗಳಿವೆ. ನೀವು ಬಿಸಾಕಬೇಕಿರುವ ವಸ್ತುವನ್ನು ಆ ಯಂತ್ರದ ಮುಂದೆ ಹಿಡಿದರೆ ಸಾಕು, ನಿಮ್ಮ ಕೈಯಲ್ಲಿ ಪ್ಲಾಸ್ಟಿಕ್ ಇದೆಯೋ, ಗಾಜಿನ ಬಾಟಲಿ ಇದೆಯೋ, ಹಸಿ ಪದಾರ್ಥವಿದೆಯೋ ಎಂಬುದನ್ನು ಎಐ ಸೆನ್ಸರ್ ಗುರುತಿಸಿ ಅದಕ್ಕೆ ತಕ್ಕುದಾದ ಬುಟ್ಟಿಯ ಬಾಗಿಲು ತೆರೆಯುತ್ತದೆ. ಅದರೊಳಗೆ ಹಾಕುವುದಷ್ಟೇ ನಮ್ಮ ಕೆಲಸ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಎಐಸ್ಮಾರ್ಟ್ ಬಿನ್ ಎಂಬ ಕಂಪನಿ ಅಭಿವೃದ್ಧಿಪಡಿಸಿರುವ ಈ ಕಸದ ಬುಟ್ಟಿಯ ಹೆಸರು ಬಿನ್ ಪ್ರೋ. “ನಮ್ಮ ಸ್ಮಾರ್ಟ್ ಕಸದ ಬುಟ್ಟಿ ಶೇ.95ರಷ್ಟು ನಿಖರತೆಯೊಂದಿಗೆ ಕಸವನ್ನು ವಿಂಗಡಿಸುತ್ತದೆ. ಪೇಟೆಂಟ್ ನೊಂದಿಗೆ ಮಾರುಕಟ್ಟೆಗೆ ಬಿನ್ ಪ್ರೊ ಅನ್ನು ತರುತ್ತಿದ್ದು, ಮೊದಲ ಹಂತದಲ್ಲಿ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್ ಗಳು ನಮ್ಮ ಗುರಿಯಾಗಿದೆ. 400 ಲೀಟರ್ ಸಾಮರ್ಥ್ಯದ ಬಿನ್ ಪ್ರೊ ಬೆಲೆ 40,000 ರೂಪಾಯಿಯಿಂದ 1.5 ಲಕ್ಷ ರೂಪಾಯಿ ಆಗಲಿದೆ” ಎಂದು ಸಂಸ್ಥೆಯ ಸಂಸ್ಥಾಪಕ ಅನುಪಮ್ ಮಹಾಜನ್ ಹೇಳುತ್ತಾರೆ.

ಬರಲಿದೆ ಕಸ ವಿಂಗಡಿಸುವ ಯಂತ್ರ

ಮುಂದಿನ ಹೆಜ್ಜೆಯಾಗಿ, ಎಐಸ್ಮಾರ್ಟ್ ಬಿನ್ ಕಂಪನಿಯು ಮಿಶ್ರ ಒಣ ತ್ಯಾಜ್ಯವನ್ನು ತಾನೇ ವಿಂಗಡಿಸುವಂತಹ ಪ್ರಪಂಚದಲ್ಲೇ ಪ್ರಪ್ರಥಮ ಯಂತ್ರವನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದೆ. ಸಂಪೂರ್ಣ ಸ್ವಯಂಚಾಲಿತವಾಗಿ ಇರಲಿರುವ ಆ ಯಂತ್ರವು ಎಐ ಇಮೇಜಿಂಗ್, ರೋಬೋಟಿಕ್, ಕನ್ವೇಯರ್ ತಂತ್ರಜ್ಞಾನವನ್ನು ಒಳಗೊಂಡಿರಲಿದೆ. ಅದಕ್ಕೆ ಪೇಟೆಂಟ್ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅನುಪಮ್ ವಿವರಿಸುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...