ಶಾಸಕರ ಭತ್ಯೆ ತುರ್ತಾಗಿ ಹೆಚ್ಚಳ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ: ಸರ್ಕಾರದ ವಿರುದ್ಧ ಎಐಡಿಎಸ್ಓ ಆಕ್ರೋಶ

Date:

ಮೇ 29ರಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಆರಂಭವಾದರೂ ಇಲ್ಲಿಯವರೆಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, “ಶಾಸಕರ ಭತ್ಯೆಯನ್ನು ತುರ್ತಾಗಿ ಹೆಚ್ಚಿಸಿಕೊಳ್ಳುವ ಸರ್ಕಾರ, ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸಿದೆ” ಎಂದು ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಎಐಡಿಎಸ್‌ಒ, “ವಿದ್ಯಾರ್ಥಿಗಳು ಕಳೆದ ವರ್ಷ ನೀಡಲಾಗಿದ್ದ ಹಳೆಯ ಶೂ ಮತ್ತು ಸಾಕ್ಸ್ ಧರಿಸಿ ಶಾಲೆಗೆ ಬರುವಂತಾಗಿದೆ. ಹಳೆಯ ಶೂ ಹರಿದು ಹೋದ ವಿದ್ಯಾರ್ಥಿಗಳು ಚಪ್ಪಲಿ ಧರಿಸಿ ಅಥವಾ ಬರಿಗಾಲಲ್ಲಿ ಶಾಲೆಗೆ ಬರುವ ಪರಿಸ್ಥಿತಿ ಎದುರಾಗಿದೆ. ಈ ವರ್ಷ ಎಲ್ಲೆಡೆ ಅಧಿಕ ಮಳೆಯಾಗುತ್ತಿದ್ದು, ಶೂಗಳಿಲ್ಲದೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಾದಚಾರಿಗಳನ್ನು ‘ಬೇವರ್ಸಿ’ಗಳಂತೆ ನಡೆಸಿಕೊಳ್ತಿದೆ ಬೆಂಗಳೂರು ನಗರ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದಿಂದ ಹಣ ಮಂಜೂರಾಗದಿರುವುದೇ ಇದಕ್ಕೆ ಕಾರಣ ಎಂಬುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸರ್ಕಾರವು ತನ್ನ ಈ ವಿಳಂಬ ಧೋರಣೆಯನ್ನು ಕೈಬಿಟ್ಟು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೂಡಲೇ ಶೂ, ಸಾಕ್ಸ್ ಖರೀದಿಸಿ ವಿತರಿಸಬೇಕು” ಎಂದು ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಶೂ ಮತ್ತು ಸಾಕ್ಸ್ ವಿತರಣೆಗೆ ಸಂಬಂಧಿಸಿದ ನಿರ್ದಿಷ್ಟ ಆದೇಶಗಳು ಅಥವಾ ಗುತ್ತಿಗೆ ಪ್ರಕ್ರಿಯೆಯ ವಿಳಂಬದಿಂದಾಗಿ ಈ ತೊಂದರೆ ಎದುರಾಗಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. 2024-25ರ ಶೈಕ್ಷಣಿಕ ವರ್ಷದಲ್ಲಿ, ಶೂ ಮತ್ತು ಸಾಕ್ಸ್ ವಿತರಣೆಯ ಗುಣಮಟ್ಟದ ಕುರಿತು ದೂರುಗಳು ಬಂದಿದ್ದವು, ಇದರಿಂದಾಗಿ ಒಪ್ಪಂದದ ಪರಿಷ್ಕರಣೆ ಅಥವಾ ಹೊಸ ಗುತ್ತಿಗೆ ಪ್ರಕ್ರಿಯೆಯ ವಿಳಂಬವಾಗಿರಬಹುದು ಎನ್ನಲಾಗುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...