ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ಜಾತಿಗಳ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಈಗಾಗಲೇ ಆದೇಶಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಆಗಸ್ಟ್ 22 ರಂದು ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ ಅಂತಹ ಅಂಶಗಳ ಬಗೆ, ಸಲಹೆ, ಸೂಚನೆಗಳು ಇದ್ದಲ್ಲಿ 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?
ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ, ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ಸೆಪ್ಟೆಂಬರ್ 1 ರಂದು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ.ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆಗಸ್ಟ್ 13 ರಂದು ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ಜಾತಿಗಳ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಈಗಾಗಲೇ ಆದೇಶಿಸಿತ್ತು.
ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ,ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ,ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.





