ಅಖಿಲ ಭಾರತ ವಕೀಲರ ಒಕ್ಕೂಟದಿಂದ ಕಾನೂನು ಸಚಿವರ ಭೇಟಿ; ಬೇಡಿಕೆ ಸಲ್ಲಿಕೆ

Date:

ಅಖಿಲ ಭಾರತ ವಕೀಲರ ಒಕ್ಕೂಟ(AILU) ರಾಜ್ಯ ಸಮಿತಿ ಹಾಗೂ ಜಿಲ್ಲಾ‌ಸಮಿತಿಯ ಜಂಟಿ‌ ನಿಯೋಗವು ಶುಕ್ರವಾರ ವಿಧಾನ ಸೌಧದಲ್ಲಿ ಕಾನೂನು ಸಚಿವರಾದ ಹೆಚ್.ಕೆ. ಪಾಟೀಲರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು.

ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ರಕ್ಷಣೆ ಮತ್ತು ವಕೀಲರ ಸಂರಕ್ಷಣೆ ಕಾಯ್ದೆ 2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು, ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿ ಪಾಲಿಸಬೇಕು, ಕಿರಿಯ ವಕೀಲರಿಗೆ 2ವರ್ಷಗಳ ಕಾಲ ಮಾಸಿಕ 10,000 ಸಹಾಯಧನ ನೀಡಬೇಕು, ಎಲ್ಲ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ಐದು ಲಕ್ಷ ಅನುದಾನ ಮತ್ತು ಜಿಲ್ಲಾ ಸಂಘಗಳಿಗೆ ಹತ್ತು ಲಕ್ಷ ಅನುದಾನ ನೀಡಬೇಕು, ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು, ಪ್ರತಿ ಜಿಲ್ಲೆಗೊಂದರಂತೆ ಕಾನೂನು ಕಾಲೇಜು ಸ್ಥಾಪಿಸಬೇಕು, ಹೆಚ್ಚುವರಿ ನ್ಯಾಯಾಲಯ ಸ್ಥಾಪಿಸಬೇಕು, ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರ ಅಕಾಡೆಮಿ ಸ್ಥಾಪಿಸಬೇಕು, ಅವೈಜ್ಞಾನಿಕ ಬಾರ್‌ ಪರೀಕ್ಷೆ ರದ್ದುಪಡಿಸಬೇಕು ಮುಂತಾದ 13 ಬೇಡಿಕೆಗಳ ಕುರಿತು ಚರ್ಚಿಸಲಾಯಿತು.

ಸಚಿವರನ್ನು ಭೇಟಿ‌ ಮಾಡಿದ ನಿಯೋಗದಲ್ಲಿ ರಾಜ್ಯಾಧ್ಯಕ್ಷರಾದ ಹರೀಂದ್ರ, ರಾಜ್ಯ ಕಾರ್ಯದರ್ಶಿ ಶ್ರೀನಿವಾಸಕುಮಾರ, ಖಜಂಚಿ ರಾಮಚಂದ್ರರೆಡ್ಡಿ, ಬೆಂಗಳೂರು ಜಿಲ್ಲಾಧ್ಯಕ್ಷರಾದ ಕೆ.ಆರ್.ವೆಂಕಟೇಶ್ ಗೌಡ, ಜಿಲ್ಲಾ ಪದಾಧಿಕಾರಿಗಳಾದ ಆನಂದ್, ಶರಣಬಸವ ಮರದ್, ಹುಳ್ಳಿ ಉಮೇಶ್, ಭೀಮನಗೌಡ, ಹೊಸಕೋಟೆಯ ರಮೇಶ್ ರವಿಕುಮಾರ್, ಹನುಮಂತರಾವ್, ಜಿಲ್ಲಾ ಸಮಿತಿ ಸದಸ್ಯರಾದ ಮೈಲೇಶ್, ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 20 at 5.21.16 PM

ತದನಂತರ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ರಾಜ್ಯಾಧ್ಯಕ್ಷರಾದ ಹರೀಂದ್ರ, ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಗೌಡ, ರಾಜ್ಯ ಕಾರ್ಯದರ್ಶಿ ಶ್ರೀನಿವಾಸಕುಮಾರ, ಜಿಲ್ಲಾ ಕಾರ್ಯದರ್ಶಿ ಶಿವಾರೆಡ್ಡಿಯವರು ಮಾತನಾಡಿದರು. ಈ ಸಂದರ್ಭದಲ್ಲಿ ರಾಮಚಂದ್ರರೆಡ್ಡಿ, ಹುಳ್ಳಿ ಉಮೇಶ್, ಆನಂದ್, ಮೈಲೇಶ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...