ಜೆಡಿಎಸ್‌ ಜೊತೆ ಮೈತ್ರಿ | ರಾಜ್ಯ ಬಿಜೆಪಿ ನಾಯಕರ ಜೊತೆ ವರಿಷ್ಠರು ಚರ್ಚಿಸಿಲ್ಲ: ಸದಾನಂದಗೌಡ

Date:

  • ನಮ್ಮನ್ನು ಹೊರಗಿಟ್ಟೇ ವರಿಷ್ಠರು ತೀರ್ಮಾನ ಮಾಡಿದ್ದಾರೆ 
  • ನಾಯಕತ್ವ ಆಯ್ಕೆ ವಿಳಂಬ ಆಗಿರೋದು ನೋವು ತಂದಿದೆ

ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟೇ ಅವರು ತೀರ್ಮಾನ ಮಾಡಿದ್ದಾರೆ ಎಂದು  ಸಂಸದ ಡಿ ವಿ ಸದಾನಂದಗೌಡ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮನ್ನು ಹೊರಗಿಟ್ಟೇ ವರಿಷ್ಠರು ತೀರ್ಮಾನ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ  ಎನ್.ಡಿ.ಎ ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ವಿಚಾರದ ಬಗ್ಗೆ ತೀರ್ಮಾನ ಮಾಡುವಾಗ ನಮ್ಮನ ಹೊರಗಿಡುತ್ತಾರೆ. ಇದು ಕರ್ನಾಟಕಕ್ಕೆ ಸೀಮಿತ ಆಗಿಲ್ಲ, ಬೇರೆ ಬೇರೆ ರಾಜ್ಯಗಳಲ್ಲಿ ಮತ ಕ್ರೂಡೀಕರಣ ಆಗಬೇಕಿದೆ‌. ಹಾಗಾಗಿ ಉನ್ನತ ಮಟ್ಟದಲ್ಲಿ ಚರ್ಚೆಯಾಗಲಿದೆ. ಅವರು ತೆಗೆದುಕೊಂಡ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ” ಎಂದರು.

ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆಗೆ ಪಕ್ಷದ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಡಿ ವಿ ಸದಾನಂದಗೌಡ, ʼʼನಿಜಕ್ಕೂ ಇಷ್ಟು ವಿಳಂಬ ಆಗಿರೋದು ನೋವಿನ ಸಂಗತಿʼʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಆಯ್ಕೆ ವಿಳಂಬ ಆಗಿರೋದು ಹೌದು, ಇದು ನಮಗೆಲ್ಲ ಅತ್ಯಂತ ನೋವು ತಂದಿದೆ. ನಾನು ನಮ್ಮ ವರಿಷ್ಠರ ಬಳಿ ಮನವಿ ಮಾಡುತ್ತೇನೆ. ಇವಾಗಲಾದ್ರೂ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಬೇಗ ಮಾಡಿ, ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ವರಿಷ್ಠರು ಉತ್ತರ ಕೊಡಬೇಕು ಎಂದು” ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...