ಸರ್ಕಾರಿ ವೈದ್ಯಕೀಯ ಕಾಲೇಜು | ಶೇ 15 ಎನ್‌ಆರ್‌ಐ ಕೋಟಾ ನೀಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

Date:

ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರ (ಎನ್‌ಆರ್‌ಐ) ಕೋಟಾವನ್ನು ಪ್ರಾರಂಭಿಸಲು 2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚುವರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.

ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಜೂನ್ 27ರಂದು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಅಧ್ಯಕ್ಷರಿಗೆ ಪತ್ರ ಬರೆದು ರಾಜ್ಯದ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚುವರಿ 508 ಎಂಬಿಬಿಎಸ್ ಸೀಟುಗಳನ್ನು ರಚಿಸುವ ಮೂಲಕ ಶೇಕಡ 15ರಷ್ಟು ಎನ್‌ಆರ್‌ಐ ಕೋಟಾವನ್ನು ಮಂಜೂರು ಮಾಡುವಂತೆ ಕೋರಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾವನ್ನು ಹೊಂದುವ ಪ್ರಸ್ತಾಪವನ್ನು ಸಮರ್ಥಿಸಿದ ಪಾಟೀಲ್, ಪದವಿಪೂರ್ವ ಮತ್ತು ಸ್ನಾತಕೋತ್ತರಗಳಲ್ಲಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಪ್ರವೇಶ ಮತ್ತು ಹೆಚ್ಚುವರಿ ಸೀಟುಗಳಿಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾರ್ಗಸೂಚಿಗಳನ್ನು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಎಂಬಿಬಿಎಸ್ ಇಂಟರ್ನ್‌ಗಳಿಗೆ ರೂ. 25 ಸಾವಿರ ಶಿಷ್ಯವೇತನ ಪಾವತಿಸಲು ಎನ್ಎಂಸಿಗೆ ಸುಪ್ರೀಂ ನಿರ್ದೇಶನ

ಹಾಗೆಯೇ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಪ್ರಸ್ತಾಪಿಸಿದ ಸಚಿವರು ಜಾಗತಿಕ ಪ್ರಭಾವಕ್ಕಾಗಿ ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಪ್ರವೇಶ ಮುಖ್ಯವಾಗುತ್ತದೆ ಎಂದರು. ಜೊತೆಗೆ ರಾಜಸ್ಥಾನ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಪುದುಚೇರಿಯ ಉದಾಹರಣೆಗಳನ್ನು ಸಚಿವರು ಉಲ್ಲೇಖಿಸಿದ್ದಾರೆ.

ಈ ಸಂದರ್ಭದಲ್ಲೇ ಲಭ್ಯವಿರುವ ಸೀಟುಗಳಲ್ಲೆ ಎನ್‌ಆರ್‌ಐ ಕೋಟಾ ರಚಿಸುವುದು ಸರಿಯಲ್ಲ. ಇದರಿಂದಾಗಿ ಸೀಟು ಪ್ರಮಾಣ ಕಡಿಮೆಯಾಗುತ್ತದೆ. ಬಡವರು ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಕಡಿಮೆ ಸೀಟು ಇರುತ್ತದೆ. ಈ ರೀತಿ ಕ್ರಮ ಕೈಗೊಂಡರೆ ವಿದ್ಯಾರ್ಥಿ, ಪೋಷಕರ ವಿರೋಧವೂ ಕೂಡಾ ಎದುರಾಗುತ್ತದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು.

ಇನ್ನು ಕರ್ನಾಟಕದಲ್ಲಿರುವ ಸರ್ಕಾರಿ ಪಶುವೈದ್ಯಕೀಯ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಶೇಕಡ 15ರಷ್ಟು ಎನ್‌ಆರ್‌ಐ ಕೋಟಾವಿದೆ ಎಂಬುವುದನ್ನು ಕೂಡಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾಕ್ಕೆ ಅನುಮತಿಯಿದೆ. ಪ್ರತಿ ವಿದ್ಯಾರ್ಥಿಗೆ ಒಂದು ಕೋಟಿ ರೂಪಾಯಿಯಿಂದ 2.5 ಕೋಟಿ ರೂಪಾಯಿಯಷ್ಟು ಕೋರ್ಸ್ ಶುಲ್ಕವನ್ನು ಪಾವತಿ ಮಾಡಲಾಗುತ್ತದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ಜಾರಿಯಾದರೆ ವಿದ್ಯಾರ್ಥಿಗೆ ವಾರ್ಷಿಕವಾಗಿ 25 ಲಕ್ಷ ರೂಪಾಯಿ ಶುಲ್ಕ ನಿಗದಿ ಮಾಡಬಹುದು. ಇದರಿಂದಾಗಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಮೊದಲ ವರ್ಷ 127 ಕೋಟಿ ರೂಪಾಯಿ ಮತ್ತು ಐದು ವರ್ಷಕ್ಕೆ 571.5 ಕೋಟಿ ರೂಪಾಯಿ ಸಂದಾಯವಾಗುತ್ತದೆ ಎಂದು ಸಚಿವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...