ಬಡವರ ಭೂಮಿ ವಂಚಿಸಿದ ಅಮೃತಾನಂದಮಯಿ ಮಠ; ಆರೋಪ

Date:

ವರ್ತೂರು ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಸರ್ವೇ ನಂ.26, 27ರಲ್ಲಿನ ಬಡವರ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ಹೇಳಿ ವಂಚಿಸಲಾಗಿದೆ. ಬಡವರ ಭೂಮಿಯನ್ನು ಮಾತಾ ಅಮೃತಾನಂದಮಯಿ ಮಠದವರು ಖಾಸಗಿ ಕಾಲೇಜು ನಡೆಸಲು ಬಳಸುತ್ತಿದ್ದಾರೆ ಎಂದು ಆರೋಪಿಸಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಸಂಘದ ನೇತೃತ್ವದಲ್ಲಿ ಸಂತ್ರಸ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೇರಿದ ಗ್ರಾಮಸ್ಥರು, “ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಆಶ್ರಮ, ಬ್ರಹ್ಮಸ್ಥಾನ, ದೇವಸ್ಥಾನ, ಶಾಲೆ, ಅನಾಥಾಶ್ರಮ, ಉಚಿತ ವೈದ್ಯಕೀಯ ಕೇಂದ್ರ ಮತ್ತು ಬಡ ವಿಧವೆಯರಿಗೆ 2000 ಉಚಿತ ಮನೆಗಳನ್ನು ಕಟ್ಟಲಾಗುವುದು ಎಂಬ ಸುಳ್ಳು ಭರವಸೆಗಳನ್ನು ನೀಡಿ, ಬಡವರ ಜಮೀನನ್ನು ಮಂಜೂರು ಮಾಡಿಸಿಕೊಂಡು ಮೋಸ ಮಾಡಲಾಗಿದೆ. ಅಲ್ಲಿ ಅಕ್ರಮವಾಗಿ ಖಾಸಗಿ ಕಾಲೇಜು ನಡೆಸುತ್ತಿದ್ದಾರೆ. ಕಸವನಹಳ್ಳಿ ಬಡಬಗ್ಗರಿಗೆ ಅನ್ಯಾಯವಾಗಿದೆ. ಗ್ರಾಮಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ಆಗ್ರಹಿಸಿದರು.

ಸಂಘದ ಗೌರವಾಧ್ಯಕ್ಷ ಜೆ.ಧರಣಿ ಮಾತನಾಡಿ, “ಸರ್ಕಾರಕ್ಕೆ ಅಮೃತಾನಂದಮಯಿ ಮಠದವರು ಸುಳ್ಳು ಭರವಸೆಗಳನ್ನು ನೀಡಿದ್ದರು. ರೈತರು ಬೇಸಾಯ ಮಾಡುತ್ತಿದ್ದ ಜಮೀನನ್ನು ಕಬಳಿಸಿದ್ದಾರೆ.  ಸುಮಾರು 22 ಎಕರೆ 23 ಕುಂಟೆ ಜಮೀನು ಅವರ ಪಾಲಾಗಿದೆ. ಅವರು ಕೊಟ್ಟಿರುವ ಭರವಸೆಗಳು ಈಡೇರಿಲ್ಲ. ಬಡ ವಿಧವೆಯರನ್ನು ಬೀದಿಗೆ ಹಾಕಿದ್ದಾರೆ. ಅಮೃತಾನಂದಮಯಿ ಮಠದವರು ಮಾಡಿರುವ ಅನ್ಯಾಯವನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಡ ದಲಿತರು ನೀಡಿರುವ ಜಮೀನನ್ನು ಹಿಂತಿರುಗಿಸಬೇಕು. ಕುಟುಂಬವನ್ನು ಸಬಲ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ನಮಗೆ ಭೂಮಿ ವಾಪಸ್‌ ನೀಡುವವರೆಗೂ ಹೋರಾಟವನ್ನು ನಡೆಸುತ್ತೇವೆ ಎಂದು ಎಚ್ಚರಿಸಿದರು.

“2021ರಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದೇವೆ. ಸರ್ಕಾರವನ್ನು ಪಾರ್ಟಿ ಮಾಡಿದ್ದೇವೆ. ಪ್ರಕರಣದ ಸಂಖ್ಯೆಯನ್ನು ಮನೆಗಳ ಮೇಲೆ ಬರೆಯಲು ಹೋದಾಗ ನಮ್ಮ ಮೇಲೆ ನಕಲಿ ದೂರು ನೀಡಿ ಕಿರುಕುಳ ಕೊಡಲಾಗಿತ್ತು. ಇದನ್ನು ಸರ್ಕಾರ ಗಮನಿಸಬೇಕು” ಎಂದು ಮನವಿ ಮಾಡಿದರು.

ಸಂಘದ ಮತ್ತೊಬ್ಬ ಗೌರವಾಧ್ಯಕ್ಷರಾದ ಇ. ಸೀನಪ್ಪ, ಅಧ್ಯಕ್ಷ ಎಂ.ವೆಂಕಟಸ್ವಾಮಿ, ಸಂಘಟನಾ ಕಾರ್ಯದರ್ಶಿ ಎನ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಸಿ.ಆನಂದ್ ಹಾಗೂ ಸಂತ್ರಸ್ತ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...