ಅಮ್ಯೂಸ್‌ಮೆಂಟ್ ಪಾರ್ಕ್- ಕಾವೇರಿ ಆರತಿಗೆ ಹೈಕೋರ್ಟ್‌ ತಾತ್ಕಾಲಿಕ ತಡೆ, ಹೋರಾಟಗಾರರು ಹೇಳುವುದೇನು?

Date:

ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಬಳಿ ರಾಜ್ಯ ಸರ್ಕಾರವು ಗಂಗಾ ಆರತಿ ಮಾದರಿಯಲ್ಲಿ ಆಯೋಜಿಸಲು ಮುಂದಾಗಿರುವ ‘ಕಾವೇರಿ ಆರತಿ’ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ 14 ದಿನಗಳ ತಡೆಯಾಜ್ಞೆ ನೀಡಿದೆ.

ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಮತ್ತು ಕಾವೇರಿ ಆರತಿ ಆಯೋಜಿಸುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪೂರಕವಾಗಿ ಕೆಲವು ದಾಖಲೆಗಳನ್ನು ಸಲ್ಲಿಸಲು ಹೈಕೋರ್ಟ್‌ ಬುಧವಾರ ಸೂಚಿಸಿ, ಗುರುವಾರಕ್ಕೆ ವಿಚಾರಣೆ ಮುಂದೂಡಿತ್ತು.

ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ಗೆ ಅಣೆಕಟ್ಟು, ಪರಿಸರ, ನದಿಗೆ ಆಗುತ್ತಿರುವ ಅಪಾಯದ ಬಗ್ಗೆ ರೈತ ಸಂಘ ಮನವರಿಕೆ ಮಾಡಿ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ 2 ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿರುವ ರೈತ ನಾಯಕಿ ಸುನಂದ ಜಯರಾಮ್ ಅವರು ಹೈಕೋರ್ಟ್‌ ಆವರಣದಲ್ಲಿ ಈ ಕುರಿತು ಈ ದಿನ.ಕಾಂ ಜೊತೆ ಮಾತನಾಡಿ, “ರೈತ, ದಲಿತ, ಕಾರ್ಮಿಕ, ಮಹಿಳಾ ಸಂಘಟನೆಗಳ ಹಾಗೂ ಗ್ರಾಮ ಪಂಚಾಯಿತಿಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೆಆರ್‌ಎಸ್‌ ಅಣೆಕಟ್ಟೆ ಬಳಿ ‘ಕಾವೇರಿ ಆರತಿ’ ನಡೆಸುವ ಪೂರ್ವಭಾವಿ ಸಭೆ ನಡೆಸಿ, ನಮ್ಮ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಈಗ ಹೈಕೋರ್ಟ್‌ ನಮ್ಮ ಮನವಿಯನ್ನು ಪುರಸ್ಕರಿಸಿ ತಾತ್ಕಾಲಿಕ ತಡೆ ನೀಡಿದೆ. ಮುಂದೆ ವಕೀಲರ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ನಾವು ಬಿಡುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರು.

ಅಮ್ಯೂಸ್‌ಮೆಂಟ್ ಪಾರ್ಕ್ ಕುರಿತು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿರುವ ರೈತ ನಾಯಕ ಬೋರಯ್ಯ, “ಅಮ್ಯೂಸ್‌ಮೆಂಟ್ ಪಾರ್ಕ್ ಮತ್ತು ಕಾವೇರಿ ಆರತಿ ಯೋಜನೆಯನ್ನು ಮಾಡುತ್ತೇವೆ ಎನ್ನುವ ಸರ್ಕಾರ ತನ್ನ ಹಠಮಾರಿತನ ಬಿಡಬೇಕು. ಇದು ಯಾವ ರೈತರಿಗೂ ಅನುಕೂಲವಿಲ್ಲ. ಕೋಟಿ ಕೋಟಿ ದುಡ್ಡು ಹೊಡೆಯಲು ರೂಪಿಸಿರುವ ಯೋಜನೆ ಇದು. ಹೈಕೋರ್ಟ್‌ ತಡೆಯಾಜ್ಞೆ ನಮಗೆ ಸಮಾಧಾನ ತಂದಿದೆ. ಮುಂದಿನ ಹೆಜ್ಜೆಗಳ ಬಗ್ಗೆ ನಾವು ಯೋಚಿಸಿ ದೊಡ್ಡ ಹೋರಾಟ ರೂಪಿಸುತ್ತೇವೆ” ಎಂದರು.

ರೈತ ಸಂಘದ ಪರವಾಗಿ ವಕಾಲತ್ತು ವಹಿಸಿರುವ ವಕೀಲ ಎಂ ಶಿವಪ್ರಕಾಶ್ ಈ ದಿನ.ಕಾಂ ಜೊತೆ ಮಾತನಾಡಿ, “ಅಮ್ಯೂಸ್‌ಮೆಂಟ್ ಪಾರ್ಕ್ ಮತ್ತು ಕಾವೇರಿ ಆರತಿ ಯೋಜನೆ ಯಾವ ರೈತರಿಗೂ ಬೇಕಾಗಿಲ್ಲ. ಅಣೆಕಟ್ಟೆ ಕಾಯ್ದೆಯನ್ನೇ ಸರ್ಕಾರ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಕೋರ್ಟ್‌ಗೆ ಸರ್ಕಾರದ ವಕೀಲರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಕೆಆರ್‌ಎಸ್‌ ಜಲಾಶಯವನ್ನು ರಕ್ಷಿಸಬೇಕಾಗಿದ್ದು ಸರ್ಕಾರದ ಜವಾಬ್ದಾರಿ. ಆದರೆ ಅದನ್ನೇ ಮರೆತು ಸರ್ಕಾರ ಜನರ ತೆರಿಗೆ ಹಣವನ್ನು ಹಾಳು ಮಾಡಲು ಹೊರಟಿದೆ. ಈಗ ಹೈಕೋರ್ಟ್‌ ನಮ್ಮ ವಾದ ಪರಿಗಣಿಸಿ ತಡೆಯಾಜ್ಞೆ ನೀಡಿದೆ. ಅಲ್ಲಿ ಈಗಾಗಲೇ ಯಾವುದೇ ಒಪ್ಪಿಗೆ ಇಲ್ಲದೇ ಕಾಮಗಾರಿ ಆರಂಭವಾಗಿದೆ. ಇದನ್ನು ನಾವು ದಾಖಲೆ ಸಮೇತ ಮುಂದಿನ ವಿಚಾರಣೆಯಲ್ಲಿ ಕೋರ್ಟ್‌ಗೆ ಸಲ್ಲಿಸುತ್ತೇವೆ” ಎಂದು ತಿಳಿಸಿದರು.

ವಕೀಲರಾದ ಶಶಾಂಕ್ ಕೆ ಸಿ, ರಘು ಜೊತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...