ಸೈಬರ್ ಕ್ರೈಂ ಹೊರತುಪಡಿಸಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಕಡಿಮೆ: ಗೃಹ ಸಚಿವ ಪರಮೇಶ್ವರ್

Date:

ಸೈಬರ್ ಕ್ರೈಂಗಳನ್ನು ಹೊರತುಪಡಿಸಿದರೆ ರಾಜ್ಯದಲ್ಲಿ ಕಳೆದ 1 ವರ್ಷದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯ‌ಲ್ಲಿ ಮಂಗಳವಾರ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಗಾಂಜಾ, ಅಫೀಮು, ಮಟ್ಕಾ, ದಂಧೆ, ಕಳ್ಳಭಟ್ಟಿ, ಸರಗಳ್ಳತನ, ವಾಹನ ಕಳವು ಹಾಗೂ ಮಾದಕವಸ್ತುಗಳ ಮಾರಾಟದ ಮೇಲೆ ನಿರಂತರವಾಗಿ ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದರು.

“ರಾತ್ರಿ ಪಾಳಿಯ ಗಸ್ತುಗಳನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು. ಹರಿಹರ ನಗರದಲ್ಲಿ 2023 ರಿಂದ -2024 ರವರೆಗೆ ಈ ಸಂಬಂಧ 123 ಪ್ರಕರಣಗಳು ದಾಖಲಾಗಿವೆ. ಹರಿಹರ ನಗರ ಪೋಲೀಸ್ ಠಾಣೆಯಲ್ಲಿ 51 ಹುದ್ದೆಗಳು ಮಂಜೂರಾಗಿದ್ದು, ಅಷ್ಟೂ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಡಿವೈಎಸ್ಪಿ ಹುದ್ದೆ ಮಂಜೂರಾತಿ ಬಗ್ಗೆ ಪರಿಶೀಲಿಸಲಾಗುವುದು. ಈ ಸಂಬಂಧ ಪ್ರಸ್ತಾವನೆ ಪಡೆದು ಕ್ರಮ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...