ಕಟುಕ, ಕಟಿಕ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ಸಿಎಂಗೆ ಮನವಿ

Date:

ರಾಜ್ಯ ಕಟಿಕ ಸಮಾಜದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಮುದಾಯದ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾತುಕತೆ ನಡೆಸಿತು.

ಕಟುಕ, ಕಟಿಕ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ನಿಯೋಗ ಒತ್ತಾಯಿಸಿತು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

“ಕುರಿ, ಮೇಕೆ ಮಾಂಸ ಕಡಿಯುವುದು ಸಮಾಜದ ಕಸುಬು. ಹೀಗಾಗಿ ಕಟುಕ ಎನ್ನುವ ಹೆಸರೂ ಸಮಾಜಕ್ಕೆ ಅಂಟಿಕೊಂಡಿದ್ದು, ಸಾಮಾಜಿಕವಾಗಿ ಬಹಳ ಹಿಂದುಳಿದಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಶಿಷ್ಟ ಜಾತಿಗೆ ಕಟಿಕ ಸಮಾಜ ಸೇರಿಸಲ್ಪಟ್ಟಿದೆ. ದೆಹಲಿ, ರಾಜಸ್ತಾನ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿಯೂ ಪರಿಶಿಷ್ಟ ಜಾತಿಗೆ ಸೇರಿದೆ. 2012 ರ ಕುಲಶಾಸ್ತ್ರೀಯ ಅಧ್ಯಯನದಲ್ಲಿಯೂ ಸಮುದಾಯದ ಕುರಿತು ಸ್ಪಷ್ಟವಾಗಿ ನಮೂದಾಗಿದೆ. ಕರ್ನಾಟಕ ಕಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಶಿಫಾರಸ್ಸು ಮಾಡಲಾಗಿದೆ” ಎಂದು ನಿಯೋಗ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕಟಿಕ ಸಮಾಜದ ಮುಖಂಡರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಆರ್ ಕೆ ಸಿದ್ರಾಮಣ್ಣ ಮನವಿ
ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...