39 ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ; ವಿನಯ್‌ ಕುಲಕರ್ಣಿ ಪತ್ನಿಗೂ ಹುದ್ದೆ

Date:

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರಕಾರ ಎರಡೂವರೆ ವರ್ಷಗಳ ಅಧಿಕಾರಾವಧಿ ತುಂಬುತ್ತಿರುವ ಬೆನ್ನಲ್ಲೇ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ್ ತೆರಳಿದ ಸಂದರ್ಭದಲ್ಲೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ.

ಇನ್ನು ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಅವರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷರಾಗಿ ಹಾಗೂ ಮತ್ತೊಬ್ಬ ಮಾಜಿ ಶಾಸಕ ಎನ್‌. ಸಂಪಂಗಿ ಅವರನ್ನು ವೇರ್‌ಹೌಸಿಂಗ್‌ ಕಾರ್ಪೊರೇಷನ್‌ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ನಾನಾ ಜಾತಿಗಳ ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಯಾರಿಗೆಲ್ಲ ಯಾವ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಸಿಕ್ಕಿದೆ ಪಟ್ಟಿ ಕೆಳಗಿದೆ.

  1. ಪಿ.ರಘು – ಸಫಾಯಿ ಕರ್ಮಚಾರಿ ಆಯೋಗ
  2. ಅರುಣ್‌ ಪಾಟೀಲ್‌ – ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ
  3. ಶಿವಲೀಲಾ ವಿನಯ್‌ ಕುಲಕರ್ಣಿ – ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
  4. ವಡ್ನಾಳ್‌ ಜಗದೀಶ್‌ – ಜೀವವೈವಿಧ್ಯ ಮಂಡಳಿ
  5. ಮುರಳಿ ಅಶೋಕ್‌ – ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
  6. ಡಾ.ಮೂರ್ತಿ – ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ
  7. ಮಲ್ಲಿಕಾರ್ಜುನ್‌ – ಮಾಜಿ ಸೈನಿಕರ ಕಲ್ಯಾಣ ಮಂಡಳಿ
  8. ಡಾ.ಬಿ.ಸಿ.ಮುದ್ದುಗಂಗಾಧರ್‌ – ಮಾವು ಅಭಿವೃದ್ಧಿ ನಿಗಮ
  9. ಶರ್ಲೆಟ್‌ ಪಿಂಟೋ – ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
  10. ಮರಿಯೋಜಿ ರಾವ್‌ – ಮರಾಠ ಅಭಿವೃದ್ಧಿ ನಿಗಮ
  11. ಎಂ.ಎ.ಗಫೂರ್‌ – ಕರಾವಳಿ ಅಭಿವೃದ್ಧಿ ಪ್ರಾಧಿಕಾರ
  12. ಕೆ. ಹರೀಶ್‌ ಕುಮಾರ್‌ – ಮೆಸ್ಕಾಂ
  13. ಎನ್‌. ಸಂಪಂಗಿ – ಕರ್ನಾಟಕ ವೇರ್‌ಹೌಸಿಂಗ್‌ ಕಾರ್ಪೊರೇಷನ್‌
  14. ವೈ. ಸಯೀದ್‌ ಅಹ್ಮದ್‌ -ದೇವರಾಜ ಅರಸು ಟ್ರಕ್‌ ಟರ್ಮಿನಲ್‌
  15. ಮಹೇಶ್‌ – ಕಾಡುಗೊಲ್ಲಅಭಿವೃದ್ಧಿ ನಿಗಮ
  16. ಮಂಜಪ್ಪ – ಬಯಲುಸೀಮೆ ಅಭಿವೃದ್ಧಿ ಮಂಡಳಿ, ಚಿತ್ರದುರ್ಗ
  17. ಧರ್ಮಣ್ಣ ಉಪ್ಪಾರ – ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
  18. ಅಗಾ ಸುಲ್ತಾನ್‌ – ಕೇಂದ್ರ ಪರಿಹಾರ ಸಮಿತಿ
  19. ಎಸ್‌.ಜಿ. ನಂಜಯ್ಯನಮಠ – ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
  20. ಆಂಜನಪ್ಪ – ಬೀಜ ಅಭಿವೃದ್ಧಿ ನಿಗಮ ನಿಯಮಿತ
  21. ನೀಲಕಂಠ ಮುಳ್ಗೆ – ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ
  22. ಬಾಬು ಹೊನ್ನಾ ನಾಯ್ಕ್‌ – ಕಾಡಾ, ಭೀಮರಾಯನಗುಡಿ, ಕಲಬುರಗಿ
  23. ಯುವರಾಜ್‌ ಕದಂ – ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ, ಬೆಳಗಾವಿ
  24. ಅನಿಲ್‌ ಕುಮಾರ್‌ ಜಾಮಬಾರ್‌ – ತೊಗರಿಬೇಳೆ ಅಭಿವೃದ್ಧಿ ನಿಗಮ, ಕಲಬುರಗಿ
  25. ಪ್ರವೀಣ್‌ ಹರ್ವಾಲ್‌ – ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ (ಜೆಸ್ಕಾಂ)
  26. ಮಂಜುನಾಥ ಪೂಜಾರಿ – ನಾರಾಯಣ ಗುರು ಅಭಿವೃದ್ಧಿ ನಿಗಮ
  27. ಸೈಯದ್‌ ಮೊಹಮೂದ್‌ ಚಿಸ್ಟಿ – ಬೇಳೆಕಾಳುಗಳ ಅಭಿವೃದ್ಧಿ ಮಂಡಳಿ ನಿಯಮಿತ, ಕಲಬುರಗಿ
  28. ಎಂ.ಎಸ್‌. ಮುತ್ತುರಾಜ್‌ – ಸವಿತಾ ಸಮಾಜ ಅಭಿವೃದ್ಧಿ ನಿಗಮ
  29. ನಂಜಪ್ಪ – ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
  30. ವಿಶ್ವಾಸ್‌ ದಾಸ್‌ – ಗಾಣಿಗ ಅಭಿವೃದ್ಧಿ ನಿಗಮ
  31. ಆರ್‌.ಎಸ್‌. ಸತ್ಯನಾರಾಯಣ – ರಾಜ್ಯ ಮದ್ಯಪಾನ ಸಂಯಮ ಮಂಡಳಿ
  32. ಗಂಗಾಧರ್‌ – ರೇಷ್ಮೆ ಮಾರುಕಟ್ಟೆ ಮಂಡಳಿ ಲಿಮಿಟೆಡ್‌
  33. ಶಿವಪ್ಪ -ಹಾಸನ ನಗರಾಭಿವೃದ್ಧಿ ಪ್ರಾಧಿಕಾರ
  34. ಬಿ.ಎಸ್‌. ಕವಲಗಿ -ನಿಂಬೆ ಅಭಿವೃದ್ಧಿ ಮಂಡಳಿ
  35. ಡಾ. ಶ್ರೀನಿವಾಸ ವೇಲು – ಕುಂಬಾರ ಅಭಿವೃದ್ಧಿ ನಿಗಮ
  36. ಟಿ.ಎಂ. ಶಹೀದ್‌ ಥೆಕ್ಕಿಲ್‌ – ರಾಜ್ಯ ಕನಿಷ್ಠ ವೇತನ ಮಂಡಳಿ
  37. ಚೇತನ್‌ ಕೆ. ಗೌಡ – ಕೈಮಗ್ಗ ಅಭಿವೃದ್ಧಿ (ಪವರ್‌ಲೂಮ್‌) ಮಂಡಳಿ
  38. ಶರಣಪ್ಪ ಸಲಾದ್‌ಪುರ್‌ -ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಅಭಿವೃದ್ಧಿ ಮಂಡಳಿ
  39. ಲಾವಣ್ಯ ಬಲ್ಲಾಳ್‌ ಜೈನ್‌ -ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...