ನವದೆಹಲಿ | ವೈದ್ಯಕೀಯ ಮೌಲ್ಯಮಾಪನ – ಶ್ರೇಣೀಕರಣ ಮಂಡಳಿ ಅಧ್ಯಕ್ಷರಾಗಿ ಕನ್ನಡಿಗ ಡಾ. ಎಂ.ಕೆ ರಮೇಶ್ ನೇಮಕ

Date:

ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಸ್ವಾಯತ್ತ ಘಟಕವಾದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಣೀಕರಣ ಮಂಡಳಿಯ (MARB) ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ವೈದ್ಯ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ಮಾಜಿ ಉಪ ಕುಲಪತಿ ಡಾ. ಎಂ.ಕೆ. ರಮೇಶ್ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ನೇಮಕಾತಿ ಸಮಿತಿಯು 2025ರ ಜುಲೈ 11ರಂದು ಈ ನಿರ್ಧಾರ ಕೈಗೊಂಡಿದ್ದು, ಡಾ. ರಮೇಶ್ ಅವರು ನಾಲ್ಕು ವರ್ಷಗಳ ಕಾಲ ಈ ಹೊಣೆಗಾರಿಕೆಯನ್ನು ನಿರ್ವಹಿಸಲಿದ್ದಾರೆ.

ದಾವಣಗೆರೆ ಜಿಲ್ಲೆಯ ಮಾಯಕೊಂಡದವರಾದ ಡಾ. ರಮೇಶ್, ಮೈಸೂರು ವೈದ್ಯಕೀಯ ಕಾಲೇಜಿನಿಂದ ಎಂ.ಬಿ.ಬಿ.ಎಸ್ ಮತ್ತು ಎಂ.ಎಸ್. (ಸರ್ಜರಿ) ಪದವಿಗಳನ್ನು ಪಡೆದಿದ್ದಾರೆ. ಅಲ್ಲದೆ, ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್‌ದಿಂದ ಫೆಲೋಶಿಪ್ (FRCS) ಪಡೆದಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ ಅವರು, ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. RGUHS ನಲ್ಲಿ ರಿಜಿಸ್ಟ್ರಾರ್ (ಮೌಲ್ಯಮಾಪನ), ಹಾಗೂ ಸೆನೆಟ್‌ಗೆ ಎರಡು ಬಾರಿ ಆಯ್ಕೆ, ವಿವಿಯ ಉಪ ಕುಲಪತಿ ಹಾಗೂ ಸ್ನಾತಕೋತ್ತರ ಕ್ಲಿನಿಕಲ್ ಅಧ್ಯಯನ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಮೇಶ್ ಅವರು ಕುಲಪತಿಯಾಗಿ, 24 ಸಾವಿರಕ್ಕೂ ಹೆಚ್ಚು ಶಿಕ್ಷಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲರ್ನಿಂಗ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (LMS) ಮೂಲಕ ತರಬೇತಿ ನೀಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. 2020ರಲ್ಲಿ NMCಯ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿ, ರಾಷ್ಟ್ರೀಯ ಮಟ್ಟದ ಶಿಕ್ಷಣ ನೀತಿಗಳನ್ನು ರೂಪಿಸಿದ್ದಾರೆ. ಕ್ಲಿನಿಕಲ್ ಟ್ರಯಲ್‌ಗಳ ನೇತೃತ್ವ ಮತ್ತು ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಲೇಖನ ಪ್ರಕಟಣೆಯಲ್ಲಿಯೂ ಗಣನೀಯ ಕೊಡುಗೆ ನೀಡಿದ್ದಾರೆ.

ಡಾ. ರಮೇಶ್ ಅವರು MARB ಅಧ್ಯಕ್ಷರಾಗಿ ನೇಮಕವಾಗಿರುವುದು ಕರ್ನಾಟಕಕ್ಕೆ ಗೌರವ ತಂದಿದ್ದು, ರಾಷ್ಟ್ರೀಯ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿದ್ದಾರೆ. ಕನ್ನಡಿಗರಾಗಿ ಹಾಗೂ ರಾಜ್ಯದ ವೈದ್ಯಕೀಯ ಕ್ಷೇತ್ರವನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಡಾ. ರಮೇಶ್ ಅವರಿಗೆ ಕರ್ನಾಟಕ ವೈದ್ಯಕೀಯ ಸಮುದಾಯವು ಹಾರ್ದಿಕ ಅಭಿನಂದನೆ ಸಲ್ಲಿಸಲಿದ್ದು, ಮುಂದಿನ ಕಾರ್ಯಕ್ಷೇತ್ರಕ್ಕೆ ಸಂಪೂರ್ಣ ಬೆಂಬಲವನ್ನು ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...