ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯ

Date:

ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ ಎಂದರು.

ಈ ಯೋಜನೆಯಡಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ. 4.5 ಲಕ್ಷ ಅನಧಿಕೃತ ಐಪಿ ಸೆಟ್‌ಗಳ ಪೈಕಿ 2 ಲಕ್ಷ ಐಪಿ ಸೆಟ್ ಸಂಪರ್ಕ ಅಧಿಕೃತಗೊಳಿಸಲಾಗಿದೆ. ಈ ಅನಧಿಕೃತ ಐಪಿ ಸೆಟ್‌ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇಲೆಗೆ ತರುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಇದನ್ನೂ ಓದಿ ಜೋಳಿಗೆ | ನಮ್ಮ ಹೊಸ ʻಪಕ್ಷʼ ಬೆಳೆಸುವ ಪ್ರಯತ್ನಗಳು: ಭಾಗ 1

ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್‌ಫಾರ್ಮ್‌ಗಳನ್ನು ಇಲಾಖೆ ಒದಗಿಸಲಿದೆ. ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ ರೂ. 11720ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ ಎಂದು ತಿಳಿಸಿದರು

ಇಂಧನ ಸಚಿವ ಕೆ ಜೆ ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...