ಕರಸೇವಕರ ಬಂಧನ | 24 ಗಂಟೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರ: ಬಿಜೆಪಿ ಎಚ್ಚರಿಕೆ

Date:

ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ಘಟಕ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತು.

ಹುಬ್ಬಳ್ಳಿಯ ಶಹರ ಠಾಣೆ ಎದುರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆದಿದೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಆರ್ ಅಶೋಕ್, “ರಾಮ ಭಕ್ತರನ್ನು ಬಂಧಿಸುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ. ರಾಜ್ಯದಲ್ಲಿ ಸುಮಾರು 56,000 ಪೆಂಡಿಂಗ್ ಕೇಸ್​ಗಳು ಇವೆ. ಆದರೆ, ಅವೆಲ್ಲವನ್ನು ಬಿಟ್ಟು ಹುಬ್ಬಳ್ಳಿ ಕಡೆ ಬಂದಿರೋದು ಯಾಕೆ? ಕರಸೇವಕರನ್ನು ಹುಡುಕಿ ಬಂಧನ ಮಾಡಿದ್ದು ನ್ಯಾಯವಾ? ರಾಮನ ಮೇಲೆ‌ ಕಾಂಗ್ರೆಸ್​ಗೆ ಕೋಪ ಏಕೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ‌ ‌ಚೀಟಿಂಗ್ ಕೇಸ್ ಇಲ್ವಾ ಎಂದು ಪ್ರಶ್ನಿಸಿದ ಅಶೋಕ್, ಹಿಂದೂ ಕಾರ್ಯಕರ್ತರನ್ನು ಹುಡುಕಿ ಹುಡುಕಿ‌ ಕೇಸ್ ಹಾಕುತ್ತಿದ್ದಾರೆ. ಕೂಡಲೇ ಜೈಲಿನಿಂದ ಶ್ರೀಕಾಂತ ಪೂಜಾರಿ ಬಿಡುಗಡೆ ಮಾಡಬೇಕು. ನನ್ನ ಮೇಲೂ ಕೇಸ್ ಇದೆ ಬಂಧಿಸಿ ನೋಡೋಣ ಎಂದು ಸರ್ಕಾರಕ್ಕೆ ಸವಾಲೆಸೆದರು.

ಪ್ರತಿಭಟನಾಕಾರರು, ಸಿಎಂ ಸಿದ್ದರಾಮಯ್ಯ ಮತ್ತು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ವಿರುದ್ಧ ಧಿಕ್ಕಾರ ಕೂಗಿದರು. “ನಾವು ರಾಮ ಭಕ್ತರಾಗಿ ಬಂದಿದ್ದೇವೆ, ಆಂಜನೇಯ ಆಗೋಕೆ ಬಿಡಬೇಡಿ” ಇದೇ ವೇಳೆ ಅಶೋಕ್ ಅವರು ಪೊಲೀಸರಿಗೆ, ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ಬೆಂಗಳೂರಲ್ಲೂ ಪ್ರತಿಭಟನೆ

“ರಾಜ್ಯದ ಕಾಂಗ್ರೆಸ್ ಸರಕಾರವು ಕರಸೇವಕರನ್ನು ಬಂಧಿಸುತ್ತಿರುವುದು ಖಂಡನೀಯ” ಎಂದು ಶಾಸಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿ, “1992ರಲ್ಲಿ ಕರಸೇವಕರನ್ನು ಹತ್ಯೆ ಮಾಡಲು ಮುಂದಾಗಿತ್ತು. ಈಗ ಜವಾಬ್ದಾರಿಯುತ ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನೀತಿ ಸ್ಪಷ್ಟವಾಗುತ್ತದೆ” ಎಂದು ಟೀಕಿಸಿದರು.

“ಅಲ್ಪಸಂಖ್ಯಾತರ ಬಗ್ಗೆ ಅತಿಯಾದ ಒಲವು ನಿಮ್ಮದು. ಹಿಂದೆ ಟಿಪ್ಪು ಜಯಂತಿ ಮಾಡಿದ್ದೀರಿ. ಕನ್ನಡ ಭಾಷಾ ಹೋರಾಟಗಾರರನ್ನು ಬಂಧಿಸುತ್ತೀರಿ. ರೈತ ವಿರೋಧಿ ನಿಲುವು ನಿಮ್ಮದು” ಎಂದರು.

ಮಾಜಿ ಸಚಿವ ಸಿ ಎನ್ ಅಶ್ವತ್ಥನಾರಾಯಣ್ ಮಾತನಾಡಿ, “ರಾಮಮಂದಿರ ನಮ್ಮ ಸ್ವಾಭಿಮಾನದ ಸಂಕೇತ. ಹಲವಾರು ಸವಾಲುಗಳ ಬಳಿಕ ಇದರ ಪುನರ್ ನಿರ್ಮಾಣವಾಗಿದೆ. ಕರ್ನಾಟಕ ಮಾತ್ರವಲ್ಲದೆ ಇಡೀ ದೇಶ ಸಂಭ್ರಮ ಪಡುವ ಈ ಸುಸಂದರ್ಭದಲ್ಲಿ ಕಾಂಗ್ರೆಸ್ ಸರಕಾರದ ಕ್ರಮ ಅತ್ಯಂತ ಆಕ್ಷೇಪಾರ್ಹ ಮತ್ತು ಖಂಡನೀಯ. ಸರಕಾರ ತನ್ನ ಭಂಡತನ ಕೈಬಿಡಬೇಕು. ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರವಾಗಲಿದೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...