ಬಸ್‌ಗೆ ಬೆಂಕಿ‌ ತಗುಲಿ ಕನಿಷ್ಠ 20 ಜನರು ಸಾವು | ಸಿದ್ದರಾಮಯ್ಯ, ಚಂದ್ರಬಾಬು ನಾಯ್ಡು ಸಂತಾಪ

Date:

ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್‌ವೊಂದು ಕರ್ನೂಲ್ ಜಿಲ್ಲೆಯ ಚಿನ್ನತೆಕುರು ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ 3.30ರ ಸುಮಾರಿಗೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿಗೆ ಆಹುತಿಯಾಗಿ 25ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಸ್‌ ಅವಘಡ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಆಂಧ್ರಪ್ರದೇಶದ ಸಿಎಂ ಎನ್‌ ಚಂದ್ರಬಾಬು ನಾಯ್ಡು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು – ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ‌ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ದುಬೈಗೆ ಅಧಿಕೃತ ಭೇಟಿಯಲ್ಲಿರುವ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ, ಅವರು ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿದರು. ಉನ್ನತ ಆಡಳಿತ ಸಿಬ್ಬಂದಿಗೆ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಪ್ರಯತ್ನಗಳನ್ನು ನೋಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ.

ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸುವಂತೆ ಮತ್ತು ಮೃತರ ಕುಟುಂಬಗಳಿಗೆ ಬೆಂಬಲ ನೀಡಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಹೆಚ್ಚಿನ ಸಾವುನೋವುಗಳನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳುವ ಅಗತ್ಯವನ್ನು ಹೇಳಿದ್ದು, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ.

ಸಚಿವರಾದ ಬಿ.ಸಿ. ಜನಾರ್ದನ ರೆಡ್ಡಿ ಮತ್ತು ಕೆ. ಅಚ್ಚನ್ನಾಯ್ಡು ಕೂಡ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...