ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ; ಕೋಮುವಾದಿ ಶಕ್ತಿಗಳು ಮನುವಾದಿ ವಿಷ ತುಂಬುತ್ತಿರುವುದಕ್ಕೆ ಮತ್ತೊಂದು ಉದಾಹರಣೆ: ಸಿಪಿಐಎಂ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ದಸ್ತಗಿರಿಯಾಗಿರುವ ಸಂಬಂಧಪಟ್ಟ ವಕೀಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅದು ಆಗ್ರಹಿಸಿದೆ.

ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ತೆರೆದ ನ್ಯಾಯಾಲಯದ ಕೋಣೆಯಲ್ಲಿ ಶೂ ಎಸೆಯಲಾಗಿದ್ದು, ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ ಎಂಬುದು ಅತ್ಯಂತ ಆಘಾತಕಾರಿ ಮತ್ತು ಶೋಚನೀಯ. ಜಾತಿವಾದಿ, ಮನುವಾದಿ ಮತ್ತು ಕೋಮುವಾದಿ ವಿಚಾರಗಳನ್ನು ಉತ್ತೇಜಿಸುವ ಬಿಜೆಪಿ ಮುಖ್ಯಮಂತ್ರಿಗಳು, ಸಚಿವರು ಮತ್ತು ನಾಯಕರ ಇತ್ತೀಚಿನ ಹೇಳಿಕೆಗಳು ಅಂತಹ ಕೃತ್ಯಗಳಿಗೆ ಧೈರ್ಯ ತುಂಬಿವೆ. ಈ ಘಟನೆಯು ಹಿಂದುತ್ವ ಕೋಮುವಾದಿ ಶಕ್ತಿಗಳು ಸಮಾಜದೊಳಕ್ಕೆ ಮನುವಾದಿ ಮತ್ತು ಕೋಮು ವಿಷವನ್ನು ಚುಚ್ಚುತ್ತಿರುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಇದು ಸಂಘ ಪರಿವಾರದ ಅಸಹಿಷ್ಣುತೆ ಮತ್ತು ತಮ್ಮಸಿದ್ಧಾಂತಕ್ಕೆ ಹೊಂದಿಕೆಯಾಗದ ಯಾವುದೇ ಅಭಿಪ್ರಾಯವನ್ನು ಸ್ವೀಕರಿಸಲು ಸಿದ್ಧವಿಲ್ಲದಿರುವುದನ್ನು ಬಿಂಬಿಸುತ್ತದೆ ಎಂದು ಪೊಲಿಟ್‍ಬ್ಯುರೊ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮೇಲೆ ವಕೀಲನಿಂದ ಶೂ ಎಸೆತ ಯತ್ನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ನ್ಯಾಯಮೂರ್ತಿ ಸಿಜೆಐ ಗವಾಯಿ ಅವರಿಗೆ ಕೇಂದ್ರ ಸರ್ಕಾರವು ಸಾಕಷ್ಟು ರಕ್ಷಣೆ ನೀಡಬೇಕೆಂದು ಸಿಪಿಐ(ಎಂ) ಆಗ್ರಹಿಸಿದೆ. ಸರ್ಕಾರವು ಅಸಹಿಷ್ಣುತೆಯನ್ನು ಹರಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದೃಢ ಕ್ರಮಗಳನ್ನು ಕೈಗೊಳ್ಳಬೇಕು, ಅದೇ ಸಮಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಮತ ವ್ಯಕ್ತಪಡಿಸುವ ಹಕ್ಕನ್ನು ರಕ್ಷಿಸಬೇಕು ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...