ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

Date:

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.

ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್

ಪ್ರೊ. ರವಿವರ್ಮ ಕುಮಾರ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್‌ 3ರಂದು ನೇಮಕ ಮಾಡಲಾಗಿದೆ ಎಂದು ವಕೀಲ ಅಶೋಕ್‌ ನಾಯ್ಕ್‌ ತಿಳಿಸಿದ್ದಾರೆ. ಹೀಗಾಗಿ, ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್‌ 19ಕ್ಕೆ ಮುಂದೂಡಲಾಗುವುದು ನ್ಯಾಯಾಲಯ ತಿಳಿಸಿದೆ.

ಬೆಂಗಳೂರಿನ ಮಹಿಳೆಯೊಬ್ಬರು, ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಆರೋಪಿಸಿ ಮಾರ್ಚ್ 14ರಂದು ಪ್ರಕರಣ ದಾಖಲಿಸಿದ್ದರು. ಆದರೆ, ಆ ಮಹಿಳೆಯು ಇತ್ತೀಚೆಗೆ (ಮೇ 26) ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಈ ನಡುವೆ ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಬಳಿಕ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿದ್ದರು.

ಅದಾದ ಬಳಿಕ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...