ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು. ದಮನಿತರಿಗೆ ಮಾತ್ರವಲ್ಲದೆ ಎಲ್ಲ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಶನಿವಾರ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 118 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

“ಬಾಬು ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರ ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ” ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಡಗು ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕ್ರಮ

ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಬಿಜೆಪಿಯವರು ಹತಾಶರಾಗಿದ್ದಾರೆ

“ಬಿಜೆಪಿಯ ಬೇಡಿಕೆಗೆಲ್ಲಾ ಉತ್ತರಿಸಲು ಸಾಧ್ಯವಿಲ್ಲ. ಬಿಜೆಪಿಯವರು ಹತಾಶರಾಗಿದ್ದು, ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಬಿಜೆಪಿಗೆ ಅಭ್ಯಾಸ. ಅವರು ಹೇಳಿದ್ದಕ್ಕೆಲ್ಲಾ ಪ್ರತಿಕ್ರಿಯೆ ನೀಡಲಾಗದು” ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...