ಪ್ರತಿ ಟನ್ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಗುರುವಾರ ವಿಕೋಪಕ್ಕೆ ತಿರುಗಿದ್ದು, ಕಿಡಿಗೇಡಿಗಳು 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಬೆಂಕಿಹಂಚಿದ್ದರು.
ಶುಕ್ರವಾರ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮುಧೋಳ ತಾಲ್ಲೂಕಿನ ಸೈದಾಪುರ ಬಳಿ ರೈತರೊಂದಿಗೆ ಸಂದಾನ ಸಭೆ ನಡೆದಿದ್ದು, ಸಭೆ ಯಶಸ್ವಿಗೊಂಡಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಮುಧೋಳ ಮತ್ತು ಜಮಖಂಡಿ ಭಾಗದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದಿದ್ದಾಗ ಕೆರಳಿದ ರೈತರು ಕಬ್ಬು ತುಂಬಿದ್ದ ಟ್ರ್ಯಾಲಿಗಳನ್ನು ನೆಲಕ್ಕೆ ಉರುಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಅದೇ ಸಮಯದಲ್ಲಿ ಕಿಡಿಗೇಡಿಗಳು ಕಬ್ಬು ತುಂಬಿದ್ದ ಟ್ರ್ಯಾಲಿಗಳಿಗೆ ಬೆಂಕಿ ಹಚ್ಚಿದ್ದರು.
ಶುಕ್ರವಾರ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಸ್ಥಳಕ್ಕೆ ಧಾವಿಸಿ ರೈತರೊಂದಿಗೆ ಸಂಧಾನ ಸಭೆ ನಡೆಸಿದರು. ಬೆಳಗಾವಿ ಕಬ್ಬು ಹೋರಾಟಗಾರ ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ಸರ್ಕಾರ 3,300 ಪ್ರತಿ ಟನ್‌ಗೆ ಕೊಡಲು ನಿರ್ಧರಿಸಿದೆ. 3,200 ಪ್ರತಿ ಟನ್‌ಗೆ ಘೋಷಿಸಲಾಗಿದ್ದು, ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ತಲಾ 50 ರೂ. ಸೇರಿಸಿ 3,300 ಪ್ರತಿ ಟನ್ ಕಬ್ಬಿಗೆ ಕೊಡುವ ಸರ್ಕಾರದ ನಿರ್ಧಾರವನ್ನು ಸಭೆಯಲ್ಲಿ ರೈತರು ಒಪ್ಪಿಕೊಂಡಿದ್ದಾರೆ.
ಬಾಗಲಕೋಟೆಯಲ್ಲಿ ಕಬ್ಬಿಗೆ ಬೆಂಕಿ ಪ್ರಕರಣ : ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ
ಬಾಗಲಕೋಟೆ ಕಬ್ಬು ಬೆಳೆಗಾರರು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿ, “ರೈತರು ಅದಕ್ಕೆ ಕಾರಣರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ನೀಡಿ ಚಳವಳಿಯನ್ನು ವಾಪಸ್ಸು ಪಡೆಯಬೇಕು” ಎಂದು ಮನವಿ ಮಾಡಿದರು.





