ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ನೇಮಕ

Date:

ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಖ್ಯಾತ ನಟ ಕಿಶೋರ್ ಕುಮಾರ್ ಅವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ್ದರು. 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ”ಸರ್ವ ಜನಾಂಗದ ಶಾಂತಿಯ ತೋಟ” ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತಿಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ಸಿಎಂ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...