ಬೆಂಗಳೂರು | ಪಡಿತರ ವಿತರಕರ ಪ್ರತಿಭಟನೆ; ನ.07ರವರೆಗೆ ಸಿಗುವುದಿಲ್ಲ ಅಕ್ಕಿ

Date:

ಅಕ್ಕಿ ಬದಲು ಫಲಾನುಭವಿಗಳಿಗೆ ಹಣ ನೀಡುವುದನ್ನು ವಿರೋಧಿಸಿ ನ್ಯಾಯಬೆಲೆ ವಿತರಕರ ಸಂಘ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಫೇರ್‌ಪ್ರೈಸ್ ಷಾಪ್ ಡೀಲರ್ಸ್ ಅಸೋಸಿಯೇಷನ್ ​​ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನಿಟ್ಟು, ನ.07ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದು, ಅಲ್ಲಿಯವರೆಗೆ ಪಡಿತರ ವಿತರಣೆ ಮಾಡದಿರಲು ನಿರ್ಧರಿಸಿದೆ.

ಸರ್ಕಾರ ಫಲಾನುಭವಿಗಳಿಗೆ ಅಕ್ಕಿ ಬದಲು ಹಣ ನೀಡುವುದನ್ನು ನಿಲ್ಲಿಸಬೇಕು ಎಂಬುದು ಇವರ ಪ್ರಮುಖ ಬೇಡಿಕೆಯಾಗಿದ್ದು, ಇ-ಕೆವೈಸಿ ಕೆಲಸ ನಿರ್ವಹಿಸಲು 23.75ಕೋಟಿ ಹಣ ಕೂಡಲೇ ಬಿಡುಗಡೆ ಮಾಡಬೇಕು. ಗೋವಾ, ಕೇರಳ ಹಾಗೂ ಮಹಾರಾಷ್ಟ್ರ ಸರ್ಕಾರಗಳು ನೀಡುವಂತೆ ನ್ಯಾಯಬೆಲೆ ಅಂಗಡಿಯವರಿಗೆ ಪ್ರತಿ ಕ್ವಿಂಟಾಲ್ ಅಕ್ಕಿ ವಿತರಿಸಲು 250ರೂಪಾಯಿ ಕಮಿಷನ್ ನೀಡಬೇಕು. ಅಂಗಡಿ ನಿರ್ವಾಹಕರು ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರ ನೆರವು ನೀಡಬೇಕು. ಪ್ರತಿ ಜಿಲ್ಲೆಗೂ ಪ್ರತ್ಯೇಕ ಸರ್ವರ್ ಸೆಂಟರ್ ಕಲ್ಪಿಸಬೇಕು. 5ಕೆಜಿ ಅಕ್ಕಿ ಹಣವನ್ನು ಡಿಬಿಟಿ ಬದಲು ಬೇರೆ ಆಹಾರ ಪದಾರ್ಥಗಳನ್ನು ನೀಡಬೇಕು. ಡಿಬಿಟಿ ಮೂಲಕವೇ ಕಮಿಷನ್ ಹಣವನ್ನು ಪಡಿತರ ವಿತರಕರಿಗೆ ನೀಡಬೇಕು ಎನ್ನುವುದು ಪ್ರತಿಭಟನಾಕಾರರ ಬೇಡಿಕೆಗಳು.

ರಾಜ್ಯದಲ್ಲಿ 4.30ಕೋಟಿ ಜನ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಫಲಾನುಭವಿಗಳಿಗೆ 1ಕೆಜಿ ಅಕ್ಕಿಯನ್ನು ವಿತರಿಸಲು ಪಡಿತರ ವಿತರಕರು 1.24ರೂ. ಕಮಿಷನ್ ಪಡೆಯುತ್ತಾರೆ. ಸರ್ಕಾರವು ಅಕ್ಕಿಯ ಬದಲು ಫಲಾನುಭವಿಗಳಿಗೆ ಹಣವನ್ನು ನೀಡಿದರೆ ಪಡಿತರ ವಿತರಕರು ಈ ಕಮಿಷನ್ ಸಿಗುವುದಿಲ್ಲ. ಡಿಬಿಟಿ ಮೂಲಕ ಫಲಾನುಭವಿಗಳಿಗೆ ಹಣವನ್ನು ವರ್ಗಾಯಿಸಲು ಸರ್ಕಾರಕ್ಕೆ 733ಕೋಟಿ ರೂ. ಬೇಕಾಗುತ್ತದೆ. ಸರ್ಕಾರ ಜನರಿಗೆ ಅಕ್ಕಿ ನೀಡಿದರೆ, ಪಡಿತರ ವಿತರಕರಿಗೆ ತಿಂಗಳಿಗೆ 856ಕೋಟಿ ರೂ. ಕಮಿಷನ್ ಹಣ ನೀಡಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...