ಬಿಜೆಪಿ ಸರ್ಕಾರವಿದ್ದಾಗ ಬೇಲೆಕೇರಿ ಅದಿರು ಲೂಟಿಯಾಗಿದೆ: ಹೆಚ್‌.ಕೆ. ಪಾಟೀಲ್‌

Date:

ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ. ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನು ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ಆರೋಪಿಸಿದ್ದಾರೆ.

ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಹ್ಲಾದ್‌ ಜೋಶಿ, ಆರ್.ಅಶೋಕ್ ಸೇರಿದಂತೆ ಎಲ್ಲರೂ ಕ್ಷಮೆ ಕೇಳಬೇಕು. ಸೈಲ್‌ಗೆ ಲೂಟಿ ಮಾಡಲು ಅನುಕೂಲ ಮಾಡಿದ 23 ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದರು. ಹೀಗಾಗಿ, ಇಂತಹ ತೀರ್ಪು ಬಂದಾಗ ಬಿಜೆಪಿ ನಾಯಕರು ಮುಖ್ಯ ಕಾರಣ ಎಂದು ಕಿಡಿಕಾರಿದರು. 

ಈ ಪ್ರಕರಣದಲ್ಲಿ ಇದ್ದವರನ್ನು ನೀವು ಕೈಬಿಟ್ಟಿದ್ದೀರಿ. ಆದರೆ, ನಾಚಿಗೆ ಪಟ್ಟುಕೊಳ್ಳದೇ ಹೇಳಿಕೆ ನೀಡಲು ಬರುತ್ತೀರಲ್ಲ? ಸಮಾಜಕ್ಕೆ ಮುಖ ತೋರಿಸಲು ನಿಮಗೆ ಮುಜುಗರ ಅನಿಸುವುದಿಲ್ಲವೆ? ಸೈಲ್‌ಗೆ ಸಹಕಾರ ನೀಡಿದ ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದಕ್ಕೆ ನೀವು ಕ್ಷಮೆ ಕೇಳಬೇಕು. ಜೊತೆಗೆ ನೀವು ಪಶ್ಚಾತ್ತಾಪ ಪಡುವುದಕ್ಕೆ ಏನು ಮಾಡಬೇಕು ಎಂದು ಆತ್ಮಾವಲೋಕ ಮಾಡಿಕೊಳ್ಳಿ ಎಂದು ಬಿಜೆಪಿ ನಾಯಕರಿಗೆ ತೀರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಬೇಲೆಕೇರಿ ಅದಿರು ಪ್ರಕರಣದಲ್ಲಿ ಸತೀಶ್ ಸೈಲ್‌ಗೆ ಜೈಲು ಶಿಕ್ಷೆ ಕುರಿತು ಮಾತನಾಡಿ, ಯಾರು ಉಪ್ಪು ತಿಂದಿದ್ದಾರೋ ಅವರು ನೀರು ಕುಡಿಯಲೇಬೇಕು. ಅವರಿಗೆ ಶಿಕ್ಷೆಯಾಗಬೇಕು ಅಂತಾ ನಾವೇ ತನಿಖೆ ಮಾಡಿಸಿದ್ದು. ಹೀಗಾಗಿ ಇಂದು ಕೋರ್ಟ್ ಸೈಲ್‌ಗೆ ಶಿಕ್ಷೆ ನೀಡಿದೆ. ಲೂಟಿ ಮಾಡಿದವರಿಗೆ ಈ ಮಟ್ಟದ ಶಿಕ್ಷೆ ನೀಡಬಹುದು ಎಂದು ಕೋರ್ಟ್ ತೀರ್ಪು ನೀಡಿ ತೋರಿಸಿದೆ ಎಂದು ಸೈಲ್‌ ವಿರುದ್ಧವೇ ಸಚಿವರು ಗುಡುಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...