ಬೆಳಗಾವಿ ಅಧಿವೇಶನ | 10 ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಸಚಿವ ಎಂ ಬಿ ಪಾಟೀಲ್

Date:

ಬೆಂಗಳೂರಿನ ಇನ್ವೆಸ್ಟ್ ಕರ್ನಾಟಕ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಒಡಂಬಡಿಕೆಗಳ ಪೈಕಿ 10 ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೊದನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಶುಕ್ರವಾರ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

“ಕಂಪನಿಗಳಿಗೆ ಉದ್ದಿಮೆ ಸ್ಥಾಪನೆಗೆ ಅಗತ್ಯವಾದ ಭೂಮಿ, ನೀರು, ವಿದ್ಯುತ್ ಪೂರೈಕೆ ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಬೆಂಗಳೂರಿನಲ್ಲಿ ಜರುಗಿದ ಇನ್ವೆಸ್ಟ್ ಕರ್ನಾಟಕ-2022 ಸಮಾವೇಶದಲ್ಲಿ 57 ಕಂಪನಿಗಳೊಂದಿಗೆ ರೂ.5.41 ಲಕ್ಷ ಕೋಟಿಗಳ ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹುಬ್ಬಳ್ಳಿಯಲ್ಲಿ ಜರುಗಿದ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ ರೂ.1.27 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಗಳು ಬೃಹತ್ ಕೈಗಾರಿಕೆಗಳು ಆಗಿರುವುದರಿಂದ ಕೈಗಾರಿಕೆಗಳ ಸ್ಥಾಪನೆಗೆ ಕನಿಷ್ಠ 3 ರಿಂದ 4 ವರ್ಷ ಕಾಲಾವಕಾಶ ಬೇಕಾಗಿರುತ್ತದೆ. 5.41 ಲಕ್ಷ ಕೋಟಿ ಬಂಡವಾಳ ಹೂಡಿಕೆಯಲ್ಲಿ ವಿದ್ಯುತ್ ಹಾಗೂ ನವೀಕರಿಸಬಹುದಾದ ಇಂಧನಗಳ ಕ್ಷೇತ್ರದಲ್ಲಿ ಶೇ.38 ರಷ್ಟು ಬಂಡವಾಳ ಹೂಡಿಕೆಯಾಗಿದೆ” ಎಂದು ಹೇಳಿದರು.

“ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಸುಮಾರು ರೂ.75 ಕೋಟಿ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಸಮಾವೇಶಕ್ಕೆ ರೂ.12.23 ಲಕ್ಷ ವೆಚ್ಚವಾಗಿದೆ. ರಾಜ್ಯ ಸರ್ಕಾರದ 2020-25ರ ಕೈಗಾರಿಕಾ ನೀತಿ ಅಡಿ, ಕೈಗಾರಿಕೆ ಸ್ಥಾಪನೆಗೆ ಸರ್ಕಾರದ ಪ್ರೋತ್ಸಾಹ ಮತ್ತು ರಿಯಾಯಿತಿಗಳನ್ನು ಪಡೆಯುವ ಕೈಗಾರಿಕೆಗಳು ಸರೋಜಿನಿ ಮಹಿಷಿ ವರದಿಯಂತೆ ಗ್ರೂಪ್ ಡಿ ವರ್ಗದಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಹಾಗೂ ಒಟ್ಟು ಉದ್ಯೋಗಗಳಲ್ಲಿ ಶೇ.70ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಕಲ್ಪಿಸಬೇಕು” ಎಂದು ಸಚಿವ ಎಂ ಬಿ ಪಾಟೀಲ್ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿಲ್ಲ, ಇದೆಲ್ಲ ಬಿಜೆಪಿಯವರ ಸೃಷ್ಟಿ: ಡಿ ಕೆ ಶಿವಕುಮಾರ್

“ಸಾರ್ವಜನಿಕರ ಹಣ ವ್ಯಯಮಾಡಿ ನಡೆಸುವ ಬಂಡವಾಳ ಹೂಡಿಕೆ ಸಮಾವೇಶಗಳು ವ್ಯರ್ಥ್ಯವಾಗಬಾರದು. ಕೈಗಾರಿಕೆಗಳು ಸ್ಥಾಪನೆ ಆಗಬೇಕು. ಹೀಗೆ ಸ್ಥಾಪಿಸಿದ ಕೈಗಾರಿಕೆಗಳು ಕನ್ನಡಿಗರಿಗೆ ಉದ್ಯೋಗ ಅವಕಾಶ ನೀಡಬೇಕು. ಈ ಹಿಂದೆ 1995ರಲ್ಲಿ ಅಂದಿನ ರಾಜ್ಯ ಸರ್ಕಾರ ಟಯೋಟಾ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಬಿಡದಿ ಬಳಿ 450 ಎಕರೆ ಜಮೀನು ನೀಡಿ, ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿತ್ತು. 18 ವರ್ಷಗಳ ತೆರಿಗೆಯನ್ನು ಕಂಪನಿ ಇಟ್ಟುಕೊಂಡು, ಪುನಃ ರಾಜ್ಯ ಸರ್ಕಾರಕ್ಕೆ ಸಂದಾಯ ಮಾಡುವ ಅವಕಾಶವನ್ನು ನೀಡಿತ್ತು. ಆದರೆ ಸರ್ಕಾರ ಕನ್ನಡಿಗರಿಗೆ ಉದ್ಯೋಗ ನೀಡಲು ವಿಧಿಸಿದ ಷರತ್ತನ್ನು ಕಂಪನಿ ಸರಿಯಾಗಿ ಅನುಷ್ಠಾನ ಮಾಡಲಿಲ್ಲ. ಈಗಲೂ ಕಂಪನಿ ರೂ.8 ಸಾವಿರ ಕೋಟಿಗೂ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡಿದೆ. ರತ್ನಗಂಬಳಿ ಹಾಸಿ ಬೃಹತ್ ಕಂಪನಿಗಳನ್ನು ತಂದು ರಾಜ್ಯದ ಜನರಿಗೆ ಉಪಯೋಗವಾಗದಿದ್ದರೆ ಹೇಗೆ? ಸರ್ಕಾರ ಈ ಕುರಿತು ಸೂಕ್ತ ಕ್ರಮ ವಹಿಸಬೇಕು” ಎಂದು ಶಾಸಕ ಎಂ.ಚಂದ್ರಪ್ಪ ಒತ್ತಾಯಿಸಿದರು.

“ಟಯೋಟಾ ಕಂಪನಿಯೊಂದಿಗಿನ ಒಪ್ಪಂದ ಕುರಿತು ಸದ್ಯ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇನೆ. ಇದೆ ಮಾದರಿ ಸವಲತ್ತು ಪಡೆದ ಎಲ್ಲಾ ಕೈಗಾರಿಕೆಗಳು ಸರ್ಕಾರದ ಆದೇಶಗಳನ್ನು ಪಾಲನೆ ಮಾಡುತ್ತಿವೆಯೇ ಎಂಬುದನ್ನು ಪರಿಶೀಲಿಸುವುದಾಗಿ ಸಚಿವ ಎಂ ಬಿ ಪಾಟೀಲ ಸದನದಲ್ಲಿ ಆಶ್ವಾಸನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...