ಬೆಳಗಾವಿ ಅಧಿವೇಶನ | ಎರಡು ವಿಧೇಯಕ, ಒಂದು ಚುನಾವಣೆ ಪ್ರಸ್ತಾವ ಅಂಗೀಕಾರ

Date:

16ನೇ ವಿಧಾನಸಭೆಯ ಎರಡನೇ ಅಧಿವೇಶನ (ಚಳಿಗಾಲ ಅಧಿವೇಶನ) ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದು, ಎರಡನೇ ದಿನದ ಕಲಾಪದಲ್ಲಿ ಒಂದು ಚುನಾವಣೆ ಪ್ರಸ್ತಾವ ಮತ್ತು ಎರಡು ವಿಧೇಯಕಗಳನ್ನು ಮಂಡಿಸಲಾಯಿತು.

“1965ರ ಕರ್ನಾಟಕ ಸಾರ್ವಜನಿಕ ಗ್ರಂಥಾಲಯಗಳ ಅಧಿನಿಯಮ ಕಲಂ 32 ಬಿ ಮೇರೆಗೆ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ನಾಲ್ಕು ಜನರನ್ನು ಚುನಾಯಿಸಬೇಕು” ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ ಅವರು ಚುನಾವಣೆ ಪ್ರಸ್ತಾವ ಮಂಡಿಸಿದರು. ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಕಾನೂನು ಸಚಿವರ ಪ್ರಸ್ತಾವವನ್ನು ಅಂಗೀಕರಿಸಿದರು.

ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು, “2023 ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವೆ ತಿದ್ದುಪಡಿ ವಿಧೇಯಕ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

ಯೋಜನೆ ಮತ್ತು ಸಾಂಖಿಕ ಸಚಿವ ಡಿ. ಸುಧಾಕರ್‌ ಪರವಾಗಿ ಕಾನೂನು ಸಚಿವ ಎಚ್‌ ಕೆ ಪಾಟೀಲ ಅವರು, 2023ನೇ ಸಾಲಿನ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ ಮಂಡಿಸಿದರು.

ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಎರಡು ವಿಧೇಯಕಗಳನ್ನು ಸಭೆಯ ಮತಕ್ಕೆ ಹಾಕಿ ಅಂಗೀಕರಿಸಿದರು. ಬಳಿಕ ಮಾತನಾಡಿದ ಅವರು, “ಎರಡ್ಮೂರು ದಿನದ ನಂತರ ಈ ವಿಧೇಯಕಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಎಲ್ಲ ಶಾಸಕರು ಭಾಗಿಯಾಗಬೇಕು. ಇದರ ಸದುಪಯೋಗ ಪಡೆಯಬೇಕು” ಎಂದು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...