ಬೆಂಗಳೂರು | ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಚಾಲಕರಿಂದ ಲಂಚ; BMTCಯ 9 ಅಧಿಕಾರಿಗಳು ಅಮಾನತು

Date:

ಮದ್ಯಪಾನ ಮಾಡಿ ಕೆಲಸಕ್ಕೆ ಹಾಜರಾಗುತ್ತಿದ್ದ ಬಿಎಂಟಿಸಿ ಬಸ್‌ ಚಾಲಕರ ಬಳಿ ಲಂಚ ಪಡೆದು, ಕರ್ತವ್ಯಕ್ಕೆ ನಿಯೋಜನೆ ಮಾಡುತ್ತಿದ್ದ ಆರೋಪದ ಮೇಲೆ 9 ಮಂದಿ ಬಿಎಂಪಿಸಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಾರಿಗೆ ಇಲಾಖೆ ಅಮಾನತು ಆದೇಶ ಹೊರಡಿಸಿದೆ.

ಬಿಎಂಟಿಸಿ ಡಿಪೋ- 35ರ ವಿದ್ಯುತ್‌ಚಾಲಿತ ಬಸ್​ಗಳ ಕೆಲ ಚಾಲಕರು ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಅಧಿಕಾರಿಗಳು ಅವರಿಂದ ಸಾವಿರಾರು ರೂಪಾಯಿ ಲಂಚ ಪಡೆದು ಕೆಲಸಕ್ಕೆ ನಿಯೋಜನೆ ಮಾಡಲಾಗುತ್ತಿದೆ ಎಂದು ಅ.31ರಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಪ್ರಕಟಿಸಿತ್ತು. ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್‌ಗಳಿಂದ ಹಲವು ಅಪಘಾತಗಳು ವರಿಯಾಗುತ್ತಿರುವ ಸಮಯದಲ್ಲಿಯೇ ಚಾಲಕರು ಮತ್ತು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು.

ಇದೀಗ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಬಿಎಂಟಿಸಿ ಸಂಚಾರ ನಿರೀಕ್ಷಕ ಶ್ರೀನಿವಾಸ, ಘಟಕ ವ್ಯವಸ್ಥಾಪಕ ಎಂ.ಜಿ ಕೃಷ್ಣ, ಡಿಇಎಸ್ ಅರುಣ್ ಕುಮಾರ್, ಕಿರಿಯ ಸಹಾಯಕಿ ಪ್ರತಿಭಾ ಕೆ.ಎಸ್, ಹವಲ್ದಾರ್ ಮಂಜುನಾಥ ಎಂ., ಸಾರಿಗೆ ಇಲಾಖೆಯ ಪೇದೆಗಳಾದ ಮಂಜುನಾಥ ಎಸ್.ಜಿ., ಚೇತನಕುಮಾರ್, ಪುನೀತ್ ಕುಮಾರ್, ಲಕ್ಷ್ಮೀ ಕೆ ಅಮಾನತುಗೊಂಡ ಅಧಿಕಾರಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಜಾತಿ ಸಮೀಕರಣ, ಮತ ವಿಭಜನೆ ಸವಾಲು; ಹ್ಯಾಟ್ರಿಕ್ ಗೆಲುವಿನತ್ತ ತೇಜಸ್ವಿ ಚಿತ್ತ

ನಿಯಮಗಳ ಪ್ರಕಾರ ಬಸ್ ಚಾಲನೆಗೆ ಚಾಲಕರನ್ನು ನಿಯೋಜಿಸುವುದಕ್ಕೂ ಮುನ್ನ ಕಡ್ಡಾಯವಾಗಿ ಡಿಪೋದಲ್ಲಿ ಚಾಲಕರು ಮದ್ಯ ಸೇವನೆ ಮಾಡುತ್ತಿದ್ದಾರೆಯೇ ಎಂದು ಪರಿಶೀಲಿಸಬೇಕು. ಮದ್ಯ ಸೇವನೆ ಮಾಡಿರುವುದು ಕಂಡುಬಂದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕರ್ತವ್ಯಕ್ಕೆ ನಿಯೋಜನೆ ಮಾಡಬಾರದು. ಆದರೆ, ಅಧಿಕಾರಿಗಳು ಮದ್ಯ ಸೇವನೆ ಮಾಡಿ ಬರುತ್ತಿದ್ದ ಚಾಲಕರಿಂದ ಲಂಚ ಪಡೆದು, ಕರ್ತವ್ಯಕ್ಕೆ ನಿಯೋಜಿಸುತ್ತಿದ್ದರು ಎಂದು ಆರೋಪಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...